ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ ನವೋದಯ ಪ್ರವೇಶ ಪರೀಕ್ಷಾ ತರಬೇತಿ ಆರಂಭ

Advt_Headding_Middle
Advt_Headding_Middle

ಸುಳ್ಯ ಮತ್ತು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನವೋದಯ ೬ನೇ ತರಗತಿ ಪ್ರವೇಶಕ್ಕೆ ನಡೆಯುವ ಪರೀಕ್ಷಾ ಪೂರ್ವ ತರಬೇತಿಗೆ ದಾಖಲಾತಿ ಆರಂಭಗೊಂಡಿದ್ದು, ಅಕ್ಟೋಬರ್ ಮೊದಲ ವಾರದಿಂದ ತರಬೇತಿ ನಡೆಯಲಿದೆ. ಸಂಸ್ಥೆಯು ಕಳೆದ 7 ವರ್ಷಗಳಿಂದ ನವೋದಯ ಪ್ರವೇಶ ಪರೀಕ್ಷಾ ತರಗತಿಗಳನ್ನು ನೀಡುತ್ತಿದ್ದು ಕಳೆದ ವರ್ಷ ಸಂಸ್ಥೆಯಲ್ಲಿ ತರಗತಿಗಳನ್ನು ಪಡೆದು ಆರು ಮಂದಿ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.
ನವೋದಯ ವಿದ್ಯಾಲಯವು ಭಾರತ ಸರಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು ಈ ಸಂಸ್ಥೆಗೆ ಪ್ರವೇಶ ಪಡೆಯಲು ಜವಾಹರ್ ನವೋದಯ ವಿದ್ಯಾಲಯ ಪ್ರತಿವರ್ಷ ಪ್ರವೇಶ ಪರೀಕ್ಷೆ ನಡೆಸುತ್ತಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ. ಈ ವಿದ್ಯಾಲಯದಲ್ಲಿ 6 ರಿಂದ 12ನೇ ತರಗತಿಯವರೆಗೆ ಉಚಿತ ಶಿಕ್ಷಣ, ವಸತಿ, ವೈದ್ಯಕೀಯ ಸೌಲಭ್ಯ ಪಠ್ಯೇತರ ಚಟುವಟಿಕೆಗಳ ಜೊತೆಗೆ ಮೌಲ್ಯಯುತ ಶಿಕ್ಷಣ ಪಡೆಯಬಹುದಾಗಿದೆ.
ನವೋದಯ ಪ್ರವೇಶ ಪರೀಕ್ಷೆಗೆ ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯು ೭ ವರ್ಷಗಳಿಂದ ತರಬೇತಿ ನೀಡುತ್ತಿದ್ದು. ಬೆಳ್ಳಾರೆ ಮತ್ತು ಸುಳ್ಯದಲ್ಲಿ ನಾಲ್ಕು ಮಂದಿ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯನ್ನು ಸಂಪರ್ಕಿಸಬಹುದೆಂದು ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.