ಪಂಜದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಕರ್ನಾಟಕ ಆಗ್ರೋ ಕೆಮಿಕಲ್ಸ್ (ಮಲ್ಟಿಪ್ಲೆಕ್ಸ್) ಬೆಂಗಳೂರು, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಸುಳ್ಯ ಕರಾವಳಿ ಎಂಟರ್‌ಪ್ರೈಸಸ್ ಇದರ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಸೆ.೧ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಸಿ.ಚಂದ್ರಶೇಖರ ಶಾಸ್ತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಆಗ್ರೋ ಕೆಮಿಕಲ್ಸ್ ಬೆಂಗಳೂರು ಇದರ ಕರ್ನಾಟಕ ಪ್ರಾಂತೀಯ ಮಾರುಕಟ್ಟೆ ವ್ಯವಸ್ಥಾಪಕ ಹಾಗೂ ತಾಂತ್ರಿಕ ಮುಖ್ಯಸ್ಥ ಡಾ.ಎಂ. ನಾರಾಯಣ ಸ್ವಾಮಿ ವಿಷಯ ಮಂಡಿಸಲಿದ್ದಾರೆ. ಕರ್ನಾಟಕ ಆಗ್ರೋ ಕೆಮಿಕಲ್ಸ್ ಏರಿಯಾ ಸೇಲ್ಸ್ ಮೆನೇಜರ್ ಬಿ.ದ್ಯಾಮನ್ ಗೌಡ, ಸುಳ್ಯ ಕರಾವಳಿ ಎಂಟರ್‌ಪೈಸಸ್ ಮಾಲಿಕ, ಕರ್ನಾಟಕ ಆಗ್ರೋ ಕೆಮಿಕಲ್ಸ್ ಇದರ ಅಧಿಕೃತ ಡಿಸ್ಟ್ರಿಬ್ಯೂಟರ್ ಚೆನ್ನಪ್ಪ ಕುಕ್ಕುಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ನೇಮಿರಾಜ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.