HomePage_Banner
HomePage_Banner
HomePage_Banner
Breaking News

ನಾಡ ಹಬ್ಬ ದಸರಾ ಆರಂಭ: ರಂಗಕ್ಕಿಳಿದ ನವರಾತ್ರಿ ವೇಷಗಳು

ಶಕ್ತಿಯ ಆರಾಧನೆಯ ನವರಾತ್ರಿ ಉತ್ಸವ ಆರಂಭಗೊಂಡಿದೆ. ನವರಾತ್ರಿ ವೇಷಗಳು ರಂಗಕ್ಕಿಳಿದಿವೆ.
ನವರಾತ್ರಿಯೆಂದರೆ ಒಂಬತ್ತು ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ `ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿ ಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ನವರಾತ್ರಿಯಲ್ಲಿ ದುರ್ಗದೇವಿಯು ಮಹಿಷಾಸುರ ಮರ್ಧಿನಿಯಾಗಿ ಮಹಿಷಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದಳು. ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತ ವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ. ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬ ನಂಬಿಕೆ ಇದೆ. ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಮುಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುವುದು ಸಂಪ್ರದಾಯ.
ಮಂಗಳವಾರ ನವರಾತ್ರಿ ಆರಂಭಗೊಂಡಿದ್ದು, ಸುಳ್ಯ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆಯು ಪ್ರಾರಂಭವಾಗಿದೆ. ಸುಳ್ಯ ನಗರದಲ್ಲಿ ಹುಲಿ, ಕರಡಿ ಸೇರಿದಂತೆ ವಿವಿಧ ವೇಷಗಳ ಜಮಾನ ಕೂಡಾ ಆರಂಭವಾಗಿದೆ.

20151013051815 (1) 20151013051815 (2)

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.