ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಅಕ್ಟೋಬರ್ 2ರಂದು ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾಗಿರುವ ಎನ್ ವೆಂಕಟ್ರಮಣ ಭಟ್ ವಹಿಸಿದ್ದರು.
ಗಾಂಧೀಜಿಯವರು ಮತ್ತು ಶಾಸ್ತ್ರಿ ಯವರು ಕಂಡ ಕನಸನ್ನು ವಿದ್ಯಾರ್ಥಿಗಳು ನನಸಾಗಿಸಬೇಕು ಎಂದು ಹೇಳಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬಾಳಿಲ ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಜಾಹ್ನವಿ ಕಾಂಚೋಡು ಅವರು ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ನನಸಾಗಿಸುವಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಬೇಕು ಎಂದು ಹೇಳಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕರಾದ ಎಂ ಎಸ್ ಶಿವರಾಮ ಶಾಸ್ತ್ರಿ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಸಹಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿದರು. ಲೋಕೇಶ್ ಬೆಳ್ಳಿಗೆ ಕಾಂiiಕ್ರಮ ನಿರೂಪಿಸಿದರು.
ಗ್ರಾಮಪಂಚಾಯತು ಬಾಳಿಲ ಮತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಶಾಲಾ ಪರಿಸರ ಮತ್ತು ಬಾಳಿಲದ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.