Breaking News

ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

Suddi logo copy

ಬೆಳ್ಳಾರೆಯಲ್ಲಿ ೨೦೦೮ರಲ್ಲಿ ಆರಂಭವಾದ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ದಿ ಸಂಸ್ಥೆಯು ದಶಮಾನೋತ್ಸವ ಸಂಭ್ರಮದಲ್ಲಿದ್ದು, ದಶಮಾನೋತ್ಸವ ಅಂಗವಾಗಿ ಹತ್ತು ವಿವಿಧ ಕಾರ್ಯಕ್ರಮಗಳನ್ನು ಹಾಗೂ ಸಾಮಾಜಿಕ ಯೋಜನೆಗಳನ್ನು ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಮೂಲಕ ರೂಪಿಸಲಾಗಿದೆ. ದಶ ವರುಷದ ನೆನಪಿಗೆ ಸುಳ್ಯ ಹಾಗೂ ಪುತ್ತೂರು ತಾಲೂಕಿನ ಅರ್ಹ ಹತ್ತು ಮಂದಿ ಬಡ ವಿದ್ಯಾರ್ಥಿಗಳಿಂದ ಉಚಿತ ಕಂಪ್ಯೂಟರ್ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಶುಲ್ಕವಿಲ್ಲದೆ ಉಚಿತವಾಗಿ ೬ ತಿಂಗಳ ಕಂಪ್ಯೂಟರ್ ಶಿಕ್ಷಣ ನೀಡಲಾಗುವುದು. ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಸಂಸ್ಥೆಯಲ್ಲಿ ಈ ತರಬೇತಿಯನ್ನು ಪಡೆಯಬಹುದು. ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ದ ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿಯ ವತಿಯಿಂದ ಪ್ರಮಾಣಪತ್ರ ನೀಡಲಾಗುವುದು. ಆಸಕ್ತ ಬಡ ವಿದ್ಯಾರ್ಥಿಗಳು ತಮ್ಮ ಸ್ವ ವಿವರಗಳನ್ನು ಬಿಳಿಹಾಳೆಯಲ್ಲಿ ಬರೆದು ನಿರ್ದೇಶಕರು, ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ದಿ ಸಂಸ್ಥೆ, ದೇವಿ ಹೈಟ್ಸ್ ಬೆಳ್ಳಾರೆ ಸುಳ್ಯ ತಾ. ದ ಕ ೫೭೪೨೧೨. ವಿಳಾಸಕ್ಕೆ ಸೆ.೨೦ ರೊಳಗೆ ತಲುಪುವಂತೆ ಕಳುಹಿಸಿ ಕೊಡಬಹುದೆಂದು ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.