ಸಂಪಾಜೆ : ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Advt_Headding_Middle
Advt_Headding_Middle

sampaje loins rakthadana shibira copy

ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರೀಮತಿ ಗಿರಿಜಾ ಮೋಹನ್ ಗ್ರಾಮ ಪಂಚಾಯತ್ ಸದಸ್ಯರು ಇವರ ಅಧ್ಯಕ್ಷತೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೆ.೧೩ ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಅಮೃತ ಟಿ. ಅಪ್ಪಣ್ಣ ನೆರವೇರಿಸಿದರು. ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ| ಪಾರ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಡಾ| ಕರುಂಬಯ್ಯ ವೈದ್ಯಾಧಿಕಾರಿಗಳು ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ರಕ್ತದಾನದ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. ಡಾ| ಶಿವಕುಮಾರ್ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ಮಡಿಕೇರಿ ಇವರು ರಕ್ತದಾನದ ಮಹತ್ವವನ್ನು ವಿವರಿಸಿದರು. ಡಾ| ಜಯರಾಮ್ ಕಾರ್ಯಕ್ರಮದಲ್ಲಿ ಸ್ವಾಗತಿಸಿದರು. ಶ್ರೀಮತಿ ಸೌಮ್ಯ ಡಿ.ಎಸ್. ಪ್ರಾರ್ಥಿಸಿದರು. ಲೋಕನಾಥ್ ವಂದಿಸಿದರು. ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಒಟ್ಟು ೩೪ ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಲಯನ್ಸ್ ಕ್ಲಬ್ ಸದಸ್ಯರು, ಸಂಘ ಸಂಸ್ಥೆಯ ಸದಸ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಜನಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ| ಜಿ.ಕೆ.ಎಸ್.ಭಟ್ ಗೌರವ ವೈಧ್ಯಾಧಿಕಾರಿಗಳು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.