ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಕುರಿತ ಮಾಹಿತಿ ಕಾರ್ಯಕ್ರಮ

Advt_Headding_Middle
Advt_Headding_Middle

Crime Free Society-2 copy

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕವು ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ “ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ” ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪುರುಷೋತ್ತಮ ಎಂ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಧರ ಗೌಡ ವಹಿಸಿದ್ದರು.
ಮುಖ್ಯಅತಿಥಿಯಾಗಿ ಸುಳ್ಯದ ಗೌರವಾನ್ವಿತ ಸಿವಿಲ್ ನ್ಯಾಯಾಧೀಶರು ಹಾಗೂ ಸುಳ್ಯದ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಜಯಪ್ರಕಾಶ್ ವಿ, ವಕೀಲರ ಸಂಘದ ಅಧ್ಯಕ್ಷ ಭಾಸ್ಕರ ರಾವ್ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಜಗದೀಶ್ ಹುದೇರಿ ಭಾಗವಹಿದ್ದರು.
ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರೆಡ್ ಕ್ರಾಸ್ ಘಟಕ ನಾಯಕ ಹೇಮಕಿರಣ ಕೆ ಎಂ, ನಾಯಕಿ ದೇವಿಕಾ ಎನ್ ಜಿ ಉಪಸ್ಥಿತರಿದ್ದರು. ಸ್ಮಿತಾ, ಚಿಂತನಾ, ತನ್ಮಯಿ, ತೃಪ್ತಿ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ನಳಿನಿ ಎಂ ವಂದಿಸಿದರು. ಹರ್ಷಿತಾ ಕೆ ಎಂ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.