ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ಜಿಲ್ಲಾ ಮಟ್ಟದ 14 ವರ್ಷದೊಳಗಿನ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಧ್ಯಾನ್ ಬಿ ಕೆ ಹಾಗೂ ಯಶ್ವಿನ್ (೮ನೇ) ತರಗತಿ ಇವರು ದ್ವಿತೀಯ ಬಹುಮಾನವನ್ನು ಗಳಿಸಿದ್ದಾರೆ. ಶಾಲಾ ಸಂಚಾಲಕರಾದ ರೆ| ಫಾ| ವಿನ್ಸೆಂಟ್ ಡಿ’ಸೋಜ ಇವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ಇವರು ತರಬೇತಿ ನೀಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸಿ| ಬಿನೋಮ ಸಹಕರಿಸಿದರು.