ಸುಳ್ಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಉದ್ಘಾಟನೆ

Advt_Headding_Middle
Advt_Headding_Middle

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ನೆಹರು ನಗರ ಪುತ್ತೂರು ಹಾಗೂ ಜನಶ್ರೀ ಮೆಡಿಕಲ್ಸ್ ಸುಳ್ಯ ಇವುಗಳ ಜಂಟಿ ಶ್ರಯದಲ್ಲಿ ವಿವೇಕ ಔಷಧಿ ಕೇಂದ್ರದಡಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನಾ ಸಮಾರಂಭ ಸೆ.೨೯ರಂದು ನಡೆಯಿತು.
ಸುಳ್ಯ ಶ್ರೀರಾಂ ಪೇಟೆಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಆರಂಭಿಸಲಾಗಿರುವ ಜನಶ್ರೀ ಮೆಡಿಕಲ್ಸ್‌ನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. “ಇಂದು ಎಲ್ಲಾ ರೋಗಗಲಿಗೂ ಔಷಧಿ ಇದೆ. ಆದರೆ ಅದನ್ನು ಸಾಮಾನ್ಯ ಮನುಷ್ಯನಿಗೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಡವರ ಕಷ್ಟವನ್ನು ತಿಳಿದಿರುವ ಪ್ರಧಾನಿ ನರೇಂದ್ರ ಮೋದಿಯವರು ಸರ್ವರಲ್ಲೂ ಒಳ್ಳೆಯ ಆರೋಗ್ಯ ಇರಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.. ಇದು ದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕಾದರೆ ಎಲ್ಲರ ಸಹಕಾರ ಅಗತ್ಯವಿದೆ“ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ’‘ಖಾಸಗಿ ಆಸ್ಪತ್ರೆಗಳು ಲೂಟಿ ಮಾಡುವ ಈ ಸಂದರ್ಭದಲ್ಲಿ ಸರಕಾರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುತ್ತದೆ. ಆದರೆ ಔಷಧಿಗಾಗಿ ಮೆಡಿಕಲ್‌ಗೆ ಹೋದಾಗ ಕಣ್ಣೀರು ತರಿಸುವ ಪರಿಸ್ಥಿತಿ ಇದೆ. ಇದನ್ನೆಲ್ಲ ಅರಿತ ಪ್ರಧಾನಿಯವರು ಲ್ಲರೂ ಆರೋಗ್ಯವಂತರಾಗಿರಬೆನ್ನುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದಾರೆ“ ಎಂದು ಹೇಳಿದರು.
ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಕ್ಯಾನ್ಸ ರ್ ತಜ್ಞ ಡಾ| ರಘು ಬಿ., ಸುಳ್ಯ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ| ಬಾನುಮತಿ, ವಿವೇಕಾನಂದ ವಿದ್ಯಾರ್ಥಿ ನಿಲಯ ಆಡಳಿತ ಮಂಡಳಿ ಕಾರ್ಯದರ್ಶಿ ತಿರುಮಲೇಶ್ವರ ಭಟ್ ಮಜಲುಮಾರು, ವಿವೇಕಾನಂದ ಪಾಲಿಟೆಕ್ನಿಕ್ ಇದರ ಆಡಳಿತ ಮಂಡಳಿ ಅಧ್ಯಕ್ಷ ಪ್ರಸನ್ನ ಎನ್ ಭಟ್, ಡಾ| ಕೆ.ಎಂ. ಕೃಷ್ಣ ಭಟ್, ಸಿ.ಮಹಾದೇವ ಶಾಸ್ತ್ರಿ ಮಣಿಲ ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.