Breaking News

ಸುಳ್ಯ ಭೂ ಅಭಿವೃಧಿ ಬ್ಯಾಂಕಿಗೆ ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

Advt_Headding_Middle
Advt_Headding_Middle

ಸರಕಾರಿ ರಂಗದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ಕಾರ‍್ಯ ಸಾಧನೆಯನ್ನು ಪರಿಗಣಿಸಿ ೨೦೧೭-೧೮ನೆ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಎಂದು ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃಧಿ ಬ್ಯಾಂಕ್ ಆಯ್ಕೆಯಾಗಿದ್ದು ನ.೧೫ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ೬೪ನೇ ರಾಜ್ಯ ಮಟ್ಟದ ಅಖಲ ಭಾರತ ಸಹಕಾರಿ ಸಪ್ತಾಹ ದಿನಾಚರಣೆಯಲ್ಲಿ ನಡೆದ ಸಮಾರಂಭದಲ್ಲಿ ಮೀನುಗಾರಿಕೆ ಯವಜನ ಸಬಲೀಕರಣ ಹಾಗೂ ಕೃಷಿ ಸಚಿವರಾದ ಪ್ರಮೋದ್ ಮದ್ವರಾಜ್ ರವರು ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತು ವ್ಯವಸ್ತಾಪಕರಾದ ಬಿ ಬಾಲಕೃಷ್ಣ ರವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂಧರ್ಭದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಸಂಸದರಾದ ನಳೀನ್ ಕುಮಾರ್ ಕಟೀಲ್, ರಾಜ್ಯ ಸಹಕಾರ ಸಚಿವರಾದ ರಮೇಶ್ ಜಾರಕಿಹೊಳಿ, ರಾಜ್ಯದ ಅರಣ್ಯ ಸಚಿವರಾದ ಬಿ.ರಮಾನಾಥ ರೈ. ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್ ಹಾಗೂ ಕಸ್ಕಾರ್ಡ್ ಬ್ಯಾಂಕಿನ ನಿರ್ದೇಶಕರಾದ ಸುದರ್ಶನ್ ಜೈನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.