HomePage_Banner
HomePage_Banner
HomePage_Banner

ಶಿರಾಡಿಘಾಟ್ ರಸ್ತೆ ದುರಸ್ತಿ ಹಿನ್ನೆಲೆ ಚಾರ್ಮಾಡಿ ಘಾಟ್‌ನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆ

ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮಂಗಳೂರು-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ೭೫ ಸಕಲೇಶಪುರ -ಶಿರಾಡಿಘಾಟ್ ರಸ್ತೆ ದುರಸ್ತಿ ಹಿನ್ನೆಲೆ ಜ. ೨೦ ರಿಂದ(ನಿನ್ನೆಯಿಂದ) ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಈ ಹಿನ್ನೆಲೆ ಚಾರ್ಮಾಡಿ ಘಾಟ್‌ನಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಮಿತಿ ಮೀರಿದೆ. ವಾಹನಗಳ ಸಂಖ್ಯೆ ಹೆಚ್ಚಳದಿಂದ ಮೂಡಿಗೆರೆ ತಾಲೂಕಿನ ಕೊಟಗೆಹಾರ ಹಾಗೂ ಚಾರ್ಮಾಡಿ ಘಾಟ್‌ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ದೂರದೂರಿಂದ ಬಂದ ಪ್ರವಾಸಿಗರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಹಾಗೂ ದೊಡ್ಡ ಪ್ರಮಾಣದ ವಾಹನಗಳು ಹಾಗೂ ಲಾರಿಗಳ ಸಂಚಾರಕ್ಕೆ ಅವಕಾಶ ಮಾಡಿ ಕೊಟ್ಟಿರುವುದರಿಂದ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.