’ಬಂದ್ ಕರೆ ನೀಡುವುದು ಸಂವಿಧಾನ ಬಾಹಿರ’ ಬಂದ್ ಕರೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ: ಅಭಿಪ್ರಾಯ

Advt_Headding_Middle
Advt_Headding_Middle
Advt_Headding_Middle

ಪುತ್ತೂರು: ಬಂದ್ ನಡೆಸಲು ಕರೆ ನೀಡುವುದು ಸಂವಿಧಾನ ಬಾಹಿರ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಫೆ.೨ರಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಬಂದ್ ನಡೆಸುವ ಮೂಲಕ ಮತ್ತೊಬ್ಬರ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಉಚ್ಛ ನ್ಯಾಯಾಲಯದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ. ರಮೇಶ್ ರವರನ್ನೊಳಗೊಂಡ ವಿಭಾಗೀಯ ಪೀಠವು ಬಂದ್ ಕರೆ ನೀಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಬಂದ್ ಕರೆ ನೀಡುವುದು ಅಸಂವಿಧಾನಿಕವಾಗಿದೆ ಮತ್ತು ಬಂದ್ ನಡೆಸುವುದರಿಂದ ಮತ್ತೊಬ್ಬರ ಮೂಲಭೂತ ಹಕ್ಕುಗಳಿಗೆ ತೊಂದರೆಯನ್ನು ಉಂಟು ಮಾಡುವಂತಾಗುತ್ತದೆ ಎಂದು ಹೇಳಿರುವ ನ್ಯಾಯ ಪೀಠವು ಬಂದ್ ನಡೆಸುವ ಮೂಲಕ ಜನ ಸಾಮಾನ್ಯರಿಗೆ ತೊಂದರೆ ನೀಡ ಬಾರದು ಎಂದು ಎಚ್ಚರಿಕೆ ನೀಡಿದೆ. ಈ ಮೂಲಕ ಬಂದ್ ಬೇಕು ಎಂದು ವಾದಿಸುತ್ತಿದ್ದವರಿಗೆ ಮತ್ತೊಮ್ಮೆ ಮುಖಭಂಗವಾಗಿದೆ.

ಮಹದಾಯಿ ವಿವಾದಕ್ಕೆ ಸಂಬಂಧಿಸಿ ಫೆ.೪ರಂದು ಬೆಂಗಳೂರು ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿದ್ದವು. ಫೆ.೪ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಬಂದ್ ಕರೆ ನೀಡಿರುವುದು ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಬಂದ್ ಕರೆಯನ್ನು ಪ್ರಶ್ನಿಸಿ ಬೆಂಗಳೂರಿನ ಸ್ವಯಂಸೇವಾ ಸಂಸ್ಥೆ ‘ಶ್ರದ್ಧಾ’ದ ಪೋಷಕರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ಬಂದ್ ಕರೆ ನೀಡಲು ಯಾರಿಗೂ ಅಧಿಕಾರ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಪದೇ ಪದೇ ಬಂದ್ ನಡೆಸುವುದರಿಂದ ಸಾರ್ವಜನಿಕರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಬಂದ್ ಅಸಂವಿಧಾನಿಕ ಎಂದು ನ್ಯಾಯ ಪೀಠ ಹೇಳಿದೆ. ಜ.೨೫ರಂದು ಮೈಸೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರವರು ಭೇಟಿ ನೀಡುವ ವೇಳೆ ಮಹದಾಯಿ ವಿಚಾರಕ್ಕೆ ಸಂಬಂಧಿಸಿ ಕನ್ನಡ ಪರ ಸಂಘಟನೆಯ ಮುಂದಾಳು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳು ಬಂದ್ ಕರೆ ನೀಡಿರುವವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಧಾನಮಂತ್ರಿಯವರ ಭೇಟಿಯ ವೇಳೆ ಮಹದಾಯಿ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಬಂದ್ ನಡೆಸಲು ಉದ್ದೇಶಿಸಿದ್ದ ವಾಟಾಳ್ ನಾಗರಾಜ್ ಬಣಕ್ಕೆ ಹೈಕೋರ್ಟ್‌ನ ಆದೇಶ ಬಿಸಿ ಮುಟ್ಟಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.