ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಆಲ್ ದಿ ಬೆಸ್ಟ್

Advt_Headding_Middle
Advt_Headding_Middle

 ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು ಏ. ೬ರವರೆಗೆ ನಡೆಯಲಿವೆ. ಈ ಬಾರಿ ರಾಜ್ಯದ ೨,೮೧೭ ಕೇಂದ್ರಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ೮,೫೪,೪೨೪ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ರಾಜ್ಯದ ೧೪,೩೮೫ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ೧,೦೧೧ ಕ್ಲಸ್ಟರ್ ಕೇಂದ್ರ ಹಾಗೂ ೧೮೦೭ ನಾನ್ ಕ್ಲಸ್ಟರ್ ಕೇಂದ್ರಗಳಿವೆ. ೪೫ ಕೇಂದ್ರಗಳನ್ನು ಸೂಕ್ಷ್ಮ ಮತ್ತು ೨೩ ಅತಿ ಸೂಕ್ಷ್ಮ ಕೇಂದ್ರಗಳನ್ನು ಗುರುತಿಸಲಾಗಿದೆ.

ಭದ್ರತೆ

೨೮೧೭ ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಅಳವಡಿಸಲಾಗಿದೆ. ಸುರಕ್ಷತೆ ದೃಷ್ಠಿಯಿಂದ ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಬಳಸುವ ವಾಹನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಮಾರ್ಗಾಧಿಕಾರಿಗಳೊಂದಿಗೆ ಪೊಲೀಸ್ ಅಧಿಕಾರಿಗಳು ಇರಲಿದ್ದಾರೆ. ಪರೀಕ್ಷಾ ಮೇಲ್ವಿಚಾರಕರು ಸೇರಿದಂತೆ ಎಲ್ಲಾ ಸಿಬ್ಬಂದಿಗೂ ಗುರುತಿನ ಚೀಟಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.