145 ಸ್ಥಾನದಲ್ಲಿ ಕಾಂಗ್ರೆಸ್‌ಗೆ ಜಯ ಖಂಡಿತ: ವೀರಪ್ಪ ಮೊಯ್ಲಿ

Advt_Headding_Middle
Advt_Headding_Middle

ಕಳೆದ ೫ ವರ್ಷಗಳಲ್ಲಿ ಮುಖ್ಯಮಂತ್ರಿ ನೇತೃತ್ವದ ಕಾಂಗ್ರೆಸ್ ಸರಕಾರ ಅತ್ಯುತ್ತಮ ಆಡಳಿತ ನಡೆಸಿದ್ದು, ಬಡವರ ಪರವಾಗಿ ನೂರಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆದ್ದರಿಂದ ಈ ಬಾರಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ೧೪೫ ಸೀಟುಗಳನ್ನು ಪಡೆಯುವುದು ಖಚಿತ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಬೆಳ್ಳಾರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರಿಗೆ ಕರ್ನಾಟಕದಲ್ಲಿ ಅವರ ನಡೆ ನಡೆಯುವುದಿಲ್ಲವೆಂದು ಗೊತ್ತಾಗಿದೆ. ಅದಕ್ಕಾಗಿ ಗಿಮಿಕ್‌ಗಳನ್ನು ನಡೆಸಲು ಆರಂಭಿಸಿದ್ದಾರೆ. ಆದರೆ ಅದ್ಯಾವುದೂ ಪರಿಣಾಮ ನಡೆಯುವುದಿಲ್ಲ. ನಾಟಕ, ಭ್ರಷ್ಠಾಚಾರ, ಮುಕ್ತ ಅನೈತಿಕ ನಡತೆ ಜನರಿಗೆ ಈಗಾಗಲೇ ತಿಳಿದಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್, ಕಾಂಗ್ರೆಸ್  ಮುಖಂಡ ಜಿ.ಎ.ಬಾವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಕೆಪಿಸಿಸಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ವೆಂಕಪ್ಪ ಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಹಾಗೂ ಇತರ ನಾಯಕರುಗಳು ಉಪಸ್ಥಿತರಿದ್ದರು.

 

ಜಾಹೀರಾತು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.