ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಫಸ್ಟ್ – ಯಾದಗಿರಿ ಲಾಸ್ಟ್- ಇಬ್ಬರು ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ

Advt_Headding_Middle
Advt_Headding_Middle
Advt_Headding_Middle

ಬೆಂಗಳೂರು: ಕಳೆದ ಮಾರ್ಚ್-ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ ಯಾದಗಿರಿ ಕೊನೆಯ ಸ್ಥಾನಿಯಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ ಒಟ್ಟಾರೆ ಶೇ.71.93 ಫಲಿತಾಂಶ ಬಂದಿದ್ದು, ಕಳೆದ ಬಾರಿಗಿಂತ (67.87) ಶೇಕಡಾ ೪ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ. 78.01ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ಶೇ.66.56 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಇಬ್ಬರು ವಿದ್ಯಾರ್ಥಿಗಳು 625ಕ್ಕೆ 625 ಅಂಕವನ್ನು ಪಡೆದಿದ್ದು, ಎಂಟು ವಿದ್ಯಾರ್ಥಿಗಳು 624 ಅಂಕಗಳನ್ನುಪಡೆದಿದ್ದಾರೆ.
ಗ್ರಾಮೀಣ ಭಾಗದ ಶೇ.74 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಗರ ಭಾಗದಲ್ಲಿ ಶೇ.69.38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಕನ್ನಡ ದ್ವಿತೀಯ ಹಾಗೂ ಚಿಕ್ಕೋಡಿ ಮೂರನೇ ಸ್ಥಾನದಲ್ಲಿದೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಮಧ್ಯಾಹ್ನ ಒಂದು ಗಂಟೆಯ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ನಾಳೆ ಮಧ್ಯಾಹ್ನ ೧೨ರ ವೇಳೆಗೆ ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಪ್ರಕಟಗೊಳ್ಳಲಿದೆ.
ಈ ಬಾರಿ ಒಟ್ಟು 4,56,103 ಬಾಲಕರು ಮತ್ತು 3,98,321 ಬಾಲಕಿಯರೂ ಸೇರಿದಂತೆ ಒಟ್ಟು 8,54,424 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 70,253 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 23,199 ಮಂದಿ ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. ಏಪ್ರಿಲ್ 15 ರಿಂದ 25 ರವರೆಗೆ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆದಿತ್ತು.

ಫಲಿತಾಂಶವನ್ನು ಆನ್ಲೈನ್ ನಲ್ಲಿ ನೋಡುವುದು ಹೇಗೆ ? : ಇದೇ ಮೊದಲ ಬಾರಿಗೆ ಅಂಕಗಳ ಮರುಎಣಿಕೆ ಮತ್ತು ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಹಾಗೂ ಜೆರಾಕ್ಸ್ ಪ್ರತಿ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ಮಾಡುವ ವ್ಯವಸ್ಥೆಯನ್ನು ಮಂಡಳಿ ಜಾರಿಗೆ ತಂದಿದೆ. ಫಲಿತಾಂಶವನ್ನು  http://karresults.nic.in, http://sslc.kar.nic.in ನಲ್ಲಿ ವೀಕ್ಷಿಸಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.