ರಾಜ್ಯದಲ್ಲಿ ಮತ್ತೊಮ್ಮೆ ರೆಸಾರ್ಟ್ ರಾಜಕೀಯ..!? ’ಆಪರೇಷನ್ ಕಮಲ’ ಮಾಡಿದ್ರೆ ಡಬಲ್ ಶಾಸಕರನ್ನು ಕರೆತರುತ್ತೇವೆ’ : ಕುಮಾರಸ್ವಾಮಿ ಎಚ್ಚರಿಕೆ

Advt_Headding_Middle
Advt_Headding_Middle

ಬೆಂಗಳೂರು: ಬಿಜೆಪಿಗೆ ಅಧಿಕಾರ ಹಿಡಿಯಲು ೮ ಸೀಟುಗಳ ಕೊರತೆ ಇದೆ. ಅದಕ್ಕಾಗಿ ನಮ್ಮ ಪಕ್ಷದ ಶಾಸಕರಿಗೆ ೧೦೦ ಕೋಟಿ ಹಣ, ಸಚಿವ ಸ್ಥಾನದ ಆಮಿಷವೊಡ್ಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಕಿಕ್ಕಿರಿದು ತುಂಬಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್‌ಡಿಕೆ, ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನ ಮಾಡಿದರೆ, ನಾವು ನಿಮ್ಮ ಪಕ್ಷದ ಡಬಲ್ ಶಾಸಕರನ್ನು ಕರೆತರುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿಯವರು ಕುದುರೆ ವ್ಯಾಪಾರ ಆರಂಭಿಸಿದರೆ ನಾನು ಶಾಸಕರನ್ನು ಕಾಪಾಡಿಕೊಳ್ಳಲು ರೆಸಾರ್ಟ್‌ಗೆ ಹೋಗುವುದು ಅನಿವಾರ್ಯವಾಗಲಿದೆ ಎಂದರು. ನನಗೆ ಎರಡು ಕಡೆಯಿಂದ ಆಫರ್ ಇದೆ. ಆದರೆ, ತಂದೆಯವರ ಮೇಲೆ ಕಪ್ಪುಚುಕ್ಕೆ ಬರಬಾರದು ಎಂದು ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಇದು ನಮಗೆ ಸಂತಸ ತರುವ ಫಲಿತಾಂಶವೇನಲ್ಲ. ಆದರು ನಾಡಿನ ಜನರ ಅಭಿವೃದ್ಧಿಗಾಗಿ ನಾನು ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಎಚ್‌ಡಿಕೆ, ಕಪ್ಪುಹಣ, ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುವ ಪ್ರಧಾನಿ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಕೆಲ ಶಾಸಕರಿಗೆ ೧೦೦ ಕೋಟಿ ಆಫರ್ ನೀಡಿದೆ. ಈ ಹಣ ಎಲ್ಲಿಂದ ನೀಡಲಾಗುತ್ತದೆ ? ಇದು ಕಪ್ಪು ಹಣವೇ ಅಥವಾ ಬಿಳಿಹಣವೇ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಕಾಂಗ್ರೆಸ್ ಅಧ್ಯಕ್ಷರು ಮತ್ತು ನಾನು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ಸುಮಾರು ೧೧೬ ಶಾಸಕರ ಬೆಂಬಲವಿರುವ ಪತ್ರವನ್ನು ಅವರಿಗೆ ಸಲ್ಲಿಸಲಿದ್ದೇವೆ, ಸರ್ಕಾರ ರಚನೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದೇವೆ. ಮೂವರು ಶಾಸಕರು ಇಂದಿನ ಸಭೆಗೆ ಗೈರು ಹಾಜರಾಗಿದ್ದಾರೆ. ಅವರು ಹೈದರಾಬಾದ್ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಗೋವಾದಲ್ಲಿ ಕಾಂಗ್ರೆಸ್‌ಗೆ ಅತಿ ಹೆಚ್ಚು ಸ್ಥಾನ ಪಡೆದಿದ್ದರೂ ಬಿಜೆಪಿ ಮೈತ್ರಿ ಸರ್ಕಾರ ರಚಿಸಿತು. ಕರ್ನಾಟಕದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ರಚಿಸಲು ಬಿಡುವುದಿಲ್ಲ ಎಂದು ಮೋದಿ ಹೇಳುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗವಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಆದಾಯ ತೆರಿಗೆ ಇಲಾಖೆ, ಸಿಬಿಐ, ಜಾರಿ ನಿರ್ದೇಶನಾಲಯ ಮತ್ತಿತರ ಸಂಸ್ಥೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಆರೋಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.