Breaking News

ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ, ಜೇಸಿಐ ಪಂಜ ಪಂಚಶ್ರೀ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”

Advt_Headding_Middle
Advt_Headding_Middle

ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ, ಜೇಸಿಐ ಪಂಜ ಪಂಚಶ್ರೀ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ, ಕೆ.ಎಸ್.ಗೌಡ ಸಮೂಹ ವಿದ್ಯಾಸಂಸ್ಥೆಗಳ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾ ಭವನದಲ್ಲಿ
“ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಉದ್ಘಾಟನೆ ಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ವೈದ್ಯಾಧಿಕಾರಿಯಾದ ಡಾ|ರಾಮಚಂದ್ರ ಭಟ್ ನಡೆಸಿಕೊಟ್ಟರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಗುರುಪ್ರಸಾದ್ ತೋಟ ವಹಿಸಿದ್ದರು. ವೇದಿಕೆಯಲ್ಲಿ ಜೇಸಿಐ ಪಂಜ ಪಂಚಶ್ರೀಯ ಕಾರ್ಯದರ್ಶಿ ಜೇಸಿ. ಜೀವನ್ ಮಲ್ಕಜೆ, ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಗೋವಿಂದ್ ಕುಮಾರ್ ಕೆ, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಯಾದ ಕಿರಣ್ ಕೆ.ಟಿ ಉಪಸ್ಥಿತಿತರಿದ್ದರು.

ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ವೈದ್ಯಾಧಿಕಾರಿಯಾದ ಡಾ|ರಾಮಚಂದ್ರ ಭಟ್ ವಿದ್ಯಾರ್ಥಿಗಳಿಗೆ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.
ಸಂಸ್ಥೆಯ ಕಾರ್ಯಾಗಾರ ಸಹಾಯಕರಾದ ಆನಂದ್ ಇವರು ಪ್ರಾರ್ಥಿಸಿ, ಗೋವಿಂದ್ ಕುಮಾರ್ ಕೆ ಸ್ವಾಗತಿಸಿದರು. ಕಿರಣ್ ಕೆ.ಟಿ ಧನ್ಯವಾದ ಸಮರ್ಪಿಸಿ, ಕೆ.ಎಸ್.ಜಿ.ಇ.ಟಿಯ ಕಾರ್ಯಕ್ರಮ ಅಧಿಕಾರಯಾದ ಶ್ರೀ ಪ್ರಸನ್ನ ವೈ.ಟಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಸುಮಾರು 75 ವಿದ್ಯಾರ್ಥಿಗಳು ಮತ್ತು ಅದ್ಯಾಪಕ ವೃಂದದವರು ರಕ್ತದಾನ ಮಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.