`ಕೈ’ ಕೊಟ್ಟ ಇಬ್ಬರು ಕಾಂಗ್ರೆಸ್ ಶಾಸಕರು..!?

Advt_Headding_Middle
Advt_Headding_Middle

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೀಗ ಬಹುಮತ ಸಾಬೀತುಪಡಿಸಬೇಕಾದ ಒತ್ತಡದಲ್ಲಿರುವ ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಮತ್ತೊಂದೆಡೆ ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಪಾಳಯದಲ್ಲಿ, ತಮ್ಮ ಶಾಸಕರು ಕೈ ಜಾರಿ ಬಿಜೆಪಿ ಪಾಲಾಗುವ ಭೀತಿಯಲ್ಲಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಚಿಹ್ನೆಯಡಿ ಸ್ಪರ್ಧಿಸಿ ಗೆದ್ದಿರುವ ಇಬ್ಬರು ಶಾಸಕರು ಇದೀಗ ಕೈ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ.


ಬಳ್ಳಾರಿಯ ವಿಜಯನಗರ ಶಾಸಕ ಆನಂದ್‌ಸಿಂಗ್, ಪತ್ನಿಯೊಂದಿಗೆ ಕಾರ್‌ನಲ್ಲಿ ಬಳ್ಳಾರಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ ಎನ್ನಲಾಗಿತ್ತು. ಇದುವರೆಗೂ ಅವರು ಪಕ್ಷದ ಮುಖಂಡರನ್ನು ಭೆಟಿಯಾಗಿಲ್ಲ. ಅಲ್ಲದೆ, ಪಕ್ಷದವರ ಫೋನ್ ಸಂಪರ್ಕಕ್ಕೂ ಸಿಕ್ಕಿಲ್ಲ ಎನ್ನಲಾಗಿದೆ. ಮತ್ತೊಂದೆಡೆ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿಗೆ ಬೆಂಬಲ ನೀಡುವ ಕಡೆಗೆ ಮುಖಮಾಡಿದ್ದಾರೆ ಎನ್ನುವ ಮಾತು ಜೋರಾಗಿದೆ. ಬೆಳಿಗ್ಗೆಯಿಂದಲೆ ಮೊಬೈಲ್ ಸಂಪರ್ಕಕ್ಕೆ ಸಿಗದೆ ದೂರ ಉಳಿದಿದ್ದಾರೆ. ಆನಂದ್ ಸಿಂಗ್ ಮೇಲೆ ಜಾರಿ ನಿರ್ದೇಶನಾಲಯದಲ್ಲಿ ಅನೇಕ ದೂರುಗಳಿವೆ. ಈ ದೂರುಗಳನ್ನು ಮುಂದಿಟ್ಟುಕೊಂಡು ಶಾಸಕರಿಗೆ ಬೆದರಿಕೆಯೊಡ್ಡಿ ಅವರ ಬೆಂಬಲವನ್ನು ಪಡೆದುಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ವಿಜಯನಗರ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಆನಂದ್ ಸಿಂಗ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
೨೦೦೮ರಲ್ಲಿ ಪ್ರಥಮ ಬಾರಿ ಬಿಜೆಪಿಯಿಂದ ಗೆದ್ದಿದ್ದ ಪ್ರತಾಪಗೌಡ ಪಾಟೀಲ, ಆ ಬಳಿಕ ಯಡಿಯೂರಪ್ಪ ಅವರೊಂದಿಗೆ ಕೆಜೆಪಿ ಸೇರಿದ್ದರು. ೨೦೧೩ರಲ್ಲಿ ಕೆಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ೨೦೧೩, ೨೦೧೮ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಹ್ಯಾಟ್ರಿಕ್ ಸಾಧನೆ ಮಾಡಿರುವ ಅವರನ್ನು ರಾಜಕೀಯಕ್ಕೆ ಮೊದಲು ಕರೆ ತಂದಿದ್ದು ವಿಧಾನ ಪರಿಷತ್ ಸದಸ್ಯರಾಗಿದ್ದ ಮನೋಹರ ಮಸ್ಕಿ ಹಾಗೂ ಶಾಸಕ ಶ್ರೀರಾಮುಲು ಅವರು. ಇದೀಗ ಪ್ರತಾಪಗೌಡ ಅವರಿಗೆ ಗಾಳ ಹಾಕಿರುವ ಶ್ರೀರಾಮುಲು ಮತ್ತು ಮನೋಹರ ಮಸ್ಕಿ ಅವರು ಬಿಜೆಪಿಯತ್ತ ಸೆಳೆದಿದ್ದಾರೆ ಎನ್ನಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.