ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ “ಎಕ್ಸ್‌ಪೋ-2018”

Advt_Headding_Middle
Advt_Headding_Middle

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ 2017-18 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ “ಎಕ್ಸ್‌ಪೋ-2018” ಮೇ 24ರಂದು ನಡೆಯಿತು. ಪ್ರದರ್ಶನದ ಉದ್ಘಾಟನೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಹೆಚ್ ಆರ್. ಶಿವಕುಮಾರ್ ನೆರವೇರಿಸಿದರು. ವಿವಿಧ ಇಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳಿಂದ ಉತ್ತಮ ಪ್ರಾಜೆಕ್ಟ್‌ಗಳು ಪ್ರದರ್ಶಿತಗೊಂಡಿದ್ದು, ವಿದ್ಯಾರ್ಥಿಗಳ ಆಸಕ್ತಿ, ಶ್ರಮ ಮತ್ತು ಸೃಜನಶೀಲತೆಗೆ ಮತ್ತು ಬೋಧಕ ವೃಂದದಿಂದ ನೀಡಲ್ಪಟ್ಟ ಸೂಕ್ತ ಮಾರ್ಗದರ್ಶನಕ್ಕೆ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರುಗಳು ಹಾಗೂ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದ್ದಾರೆ. ಕಾರ್ಯಕ್ರಮದಲ್ಲಿ ಎ.ಒ.ಎಲ್.ಇ. ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ಉಪಪ್ರಾಂಶುಪಾಲರಾದ ಡಾ. ಎಚ್. ಆರ್. ಶಿವಕುಮಾರ್, ಪ್ರೊ. ಕೆ.ವಿ. ದೇವದಾಸ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು. ಇತರ ಇಂಜಿನಿಯರಿಂಗ್ ಕಾಲೇಜುಗಳ ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳು ಈ ಪ್ರಾಜೆಕ್ಟ್ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ್ದರು. ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಪ್ರಶಾಂತ್ ಟಿ.ಎಂ. ಹಾಗೂ ಸಂದೇಶ್ ಕೆ.ಜೆ. ಕಾರ್ಯಕ್ರಮದ ಸಮನ್ವಯಕಾರರಾಗಿದ್ದರು. ಎಕ್ಸ್‌ಪೋ-೨೦೧೮ ಪ್ರಾಜೆಕ್ಟ್ ವೀಕ್ಷಣೆಗೆ ನೆಹರು ಮೆಮೋರಿಯಲ್ ಕಾಲೇಜು, ಸರಕಾರಿ ಜೂನಿಯರ್ ಕಾಲೇಜು, ಶ್ರೀ ಶಾರದಾ ಪಿ.ಯು ಕಾಲೇಜು ಮತ್ತು ಅಮರಜ್ಯೋತಿ ಪಿ.ಯು. ಕಾಲೇಜಿನಿಂದ ಹಲವಾರು ವಿದ್ಯಾರ್ಥಿಗಳು ಆಗಮಿಸಿದರು. ಸಾರ್ವಜನಿಕರು ಕೂಡಾ ಪ್ರಾಜೆಕ್ಟನ್ನು ವೀಕ್ಷಿಸಿ ಅದರ ಸದುಪಯೋಗ ಪಡೆದುಕೊಂಡರು. ಕಾಲೇಜಿನ ಆರು ಇಂಜಿನಿಯರಿಂಗ್ ವಿಭಾಗಗಳಿಂದ ಒಟ್ಟು ಎಂಬತ್ತು ಪ್ರಾಜೆಕ್ಟ್‌ಗಳು ಪ್ರದರ್ಶಿತಗೊಂಡವು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.