Breaking News

ಕಾಯರ್ತೋಡಿ: ಮಕ್ಕಳಲ್ಲಿ ಸ್ವಚ್ಛತೆ ಮತ್ತು ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle

ಭಾರತ ಸರ್ಕಾರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು ಮತ್ತು ರಾಜ್ಯಪ್ರಶಸ್ತಿ ಪುರಸ್ಕೃತ ಮಿತ್ರ ಬಳಗ ಕಾಯರ್ತೋಡಿ ಹಾಗೂ ಇದರ ಬೆಳ್ಳಿ ಹಬ್ಬ ಆಚರಣಾ ಸಮಿತಿಗಳ ಜಂಟಿ ಆಶ್ರಯದಲ್ಲಿ ಸ್ವಚ್ಛ ಭಾರತ ಬೇಸಿಗೆ ತರಬೇತಿ ಕಾರ್ಯಕ್ರಮದಡಿಯಲ್ಲಿ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರವು ಕಾಯರ್ತೋಡಿ ದೇವಸ್ಥಾನದ ವಠಾರದಲ್ಲಿ ಮೇ. 18ರಂದು ನಡೆಯಿತು.


ಈ ಸಂದರ್ಭದಲ್ಲಿ ಯುವ ಪ್ರತಿಭೆ ಸೌಮ್ಯ ದೇಂಗೋಡಿ ಮಾತನಾಡಿ ” ಸ್ವಚ್ಛತೆಯ ಅರಿವು ಮಕ್ಕಳಲ್ಲಿ ಮೂಡಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾದ ಕಾರಣ ಭವ್ಯ ಭಾರತದ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಕೊಡುಗೆ ಅವಶ್ಯಕವಾದುದು” ಎಂದು ಹೇಳಿದರು. ಮಿತ್ರ ಬಳಗದ ಅಧ್ಯಕ್ಷ ದೇವಿಪ್ರಸಾದ್ ಜಿ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಮಟ್ಟದ ತೀರ್ಪುಗಾರ ಕುಸುಮಾಧರ ಎ.ಟಿ. ಉಪಸ್ಥಿತರಿದ್ದರು. ದೀಪಕ್ ಕೆ. ಸ್ವಾಗತಿಸಿ, ಸಂದೇಶ್ ಕೆ.ಎಸ್. ವಂದಿಸಿದರು. ಪ್ರಧಾನ ಕಾರ್ಯದರ್ಶಿ ದೇವರಾಜ್ ಕುದ್ಪಾಜೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.