ಸಾಲ ಮನ್ನಾ ಮಾಡದಿದ್ದರೆ ರಾಜೀನಾಮೆ: ಕುಮಾರಸ್ವಾಮಿ

Advt_Headding_Middle
Advt_Headding_Middle


 ಸಾಲ ಮನ್ನಾ ಮಾಡದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಯಾರೂ ಸಹ ರಾಜೀನಾಮೆ ನೀಡಿ ಎಂದು ಒತ್ತಡ ಹೇರುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ

ಭಾನುವಾರ ವಿಧಾನಸೌಧದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ’ನಾನು ಆರೂವರೆ ಕೋಟಿ ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ. ರೈತರ ಸಾಲ ಮನ್ನಾ ಮಾಡಬೇಕಾದರೆ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್‌ನೊಂದಿಗೂ ಚರ್ಚೆ ನಡೆಸಬೇಕಾಗುತ್ತದೆ, ರೈತರ ಸಾಲ ಮನ್ನಾ ಮಾಡುವುದರ ಬಗ್ಗೆ ನಿರ್ಧಾರ ಕೈಗೊಳ್ಳಲು ಒಂದು ವಾರ ಕಾಲಾವಕಾಶ ನೀಡಿ ಎಂದಿದ್ದಾರೆ.

’ಯಾವ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ನಾನು ಖುರ್ಚಿಗೆ ಅಂಟಿಕೊಂಡು ಕೂರುವವನಲ್ಲ. ಯಡಿಯೂರಪ್ಪ ರೈತರ ಆತ್ಮಹತ್ಯೆಗೆ ಪ್ರಚೋದನೆ ನೀಡುವುದು ಬೇಡ. ಅವರಿಗೆ ಸಣ್ಣ ಮಾನವೀಯತೆ ಬೇಡವೆ?. ನಮ್ಮ ಮಾತಿನಿಂದ ರೈತ ಕುಟುಂಬಗಳು ಕಂಗಾಲಾಗಿ ರೈತರ ಮಕ್ಕಳು ಅನಾಥರಾದರೆ ಯಾರು ಗತಿ?’ ಎಂದು ಪ್ರಶ್ನಿಸಿದ ಸಿಎಂ, ರೈತ ಸಂಘಟನೆಗಳು ನನಗೆ ಒತ್ತಡ ತರುವುದು ಬೇಡ. ಚುನಾವಣೆ ಸಂದರ್ಭದಲ್ಲಿ ರೈತ ಸಂಘಟನೆಯವರು ಯಾರ‍್ಯಾರು ಏನೇನು ಮಾಡಿದ್ದಾರೆ ಅಂತ ನನಗೆ ಗೊತ್ತು, ನಾನು ಕುರ್ಚಿಗೆ ಅಂಟಿಕೊಂಡು ಕೂರುವವನಲ್ಲ ಎಂದರು.

ನಿಮ್ಮಲ್ಲಿ ನಾನೂ ಒಬ್ಬ, ರೈತರು ಕಂಗಾಲಾಗುವ ಅವಶ್ಯಕತೆ ಇಲ್ಲ. ಒಂದು ವಾರ ಸಮಯ ಕೊಡಿ ಎಂದು ರೈತರಲ್ಲಿ ಮನವಿ ಮಾಡಿದರು. ಕಾಂಗ್ರೆಸ್ ನವರು ಹಣಕಾಸು ಖಾತೆ ಕೇಳುತ್ತಿದ್ದಾರೆ, ಸಂಪುಟ ರಚನೆ ಸಂದರ್ಭದಲ್ಲಿ ಪ್ರಮುಖ ಖಾತೆಗಳನ್ನು ಕೇಳುವುದು ಸಹಜ. ಇನ್ನೂ ಈ ಬಗ್ಗೆ ತೀರ್ಮಾನ ಆಗಬೇಕಿದೆ. ಪ್ರಮುಖ ಖಾತೆಗಳ ಹಂಚಿಕೆಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಕೆಲವೊಂದು ಖಾತೆಗಳನ್ನು ಕೇಳೋದು ಸಾಮಾನ್ಯ. ಇದರಲ್ಲಿ ಯಾವುದೇ ರೀತಿಯ ಫೈಟ್ ಇಲ್ಲ ಎಂದರು. ನಾಳೆ ದೆಹಲಿಗೆ ತೆರಳಿ ಪ್ರಧಾನಿ ಭೇಟಿ ಮಾಡಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.