ಗುರು ಮತ್ತು ಗುರಿಯಿಂದ ವಿಜಯ : ವೆಂಕಟ್ ವಳಲಂಬೆ

Advt_Headding_Middle
Advt_Headding_Middle

ಗುರು ಮತ್ತು ಗಿರಿ ಇದ್ದಾಗ ಯಶಸ್ಸು ಸಾಧ್ಯವಿದೆ ಎನ್ನುವುದನ್ನು ಸುಳ್ಯ ಕ್ಷೇತ್ರ ತೋರಿಸಿಕೊಟ್ಟಿದೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು.
ಬಿಜೆಪಿ ಕಾರ್ಯಕರ್ತರಿಗೆ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ಇಲ್ಲಿಗೆ ಬಂದು ತಳಮಟ್ಟದ ಕಾರ್ಯಕರ್ತರನ್ನು ಹುರಿದುಂಬಿಸಿದ್ದರು. ಅವರ ಯೋಚನೆ ಇಲ್ಲಿ ಯಶಸ್ವಿಯಾಗಿ ನಡೆದಿದೆ. ಕಾರ್ಯಕರ್ತರು ಒಗ್ಗಟ್ಟಾಗಿ ದುಡಿದು ಪಕ್ಷವನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಹೇಳಿದರು. ವಿರೋಧ ಪಕ್ಷಗಳಿಗೆ ನಮ್ಮ ಬಗ್ಗೆ ಮಾತನಾಡುವ ಯಾವ ಅರ್ಹತೆಯೂ ಇರಲಿಲ್ಲ. ಒಂದು ವೇಳೆ ಅವರು ಚುನಾವಣೆಗೆ ಮುಂಚೆಯೇ ಮೈತ್ರಿ ಮಾಡಿಕೊಂಡಿದ್ದರೆ ಸುಳ್ಯದಲ್ಲಿ ನಮ್ಮ ಗೆಲುವಿನ ಅಂತರ ಇನ್ನಷ್ಟು ಹೆಚ್ಚುತ್ತಿತ್ತು. ಮಂಗಳೂರಿನಲ್ಲಿ ಮತ ಎಣಿಕೆಯ ವೇಳೆ ಇನ್ನು ಮುಂದಿನ ಚುನಾವಣೆಯಲ್ಲಿ ನಾವು ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳುತ್ತಿದ್ದರು ಎಂದು ವೆಂಕಟ್ ವಳಲಂಬೆ ಹೇಳಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.