HomePage_Banner
HomePage_Banner
HomePage_Banner
HomePage_Banner

ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ಸಂಸದರಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ


ವಿಶ್ವ ಪರಿಸರ ದಿನಾಚರಣೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಇವರು ಸುಳ್ಯ ತಾಲೂಕಿನ ಬಾಳಿಲದ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.

ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ನಂತರ ಸಂಸದ ನಳಿನ್ ಕುಮಾರ್ ಕಟೀಲ್ ರವರು ನೂತನವಾಗಿ ನಿರ್ಮಾಣ ಹಂತದಲ್ಲಿರುವ ಪಂಚಾಯತ್ ಕಟ್ಟಡದ ಕಾಮಗಾರಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್ ಮನ್ಮಥ, ಬಿಜೆಪಿ ಮುಖಂಡ ಪಿಜಿ. ಎನ್ ಪ್ರಸಾದ್, ತಾಲೂಕು ಪಂಚಾಯತ್ ಸದಸ್ಯೆ ಜಾಹ್ನವಿ ಕಾಂಚೊಡು, ಸುರೇಶ್ ಬೆಳ್ಳಾರೆ, ಚಂದ್ರಶೇಖರ ಪನ್ನೆ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

 

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.