ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ

Advt_Headding_Middle
Advt_Headding_Middle

ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿದ್ದಕ್ಕಾಗಿ ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾಧನಾ ಪ್ರಶಸ್ತಿ ಲಭಿಸಿದೆ.


ಮಂಗಳೂರಿನಲ್ಲಿ ಸೆ.1 ರಂದು ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಢಾ| ಎಂ.ಎನ್.ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಮತ್ತು ಮಹಾ ಪ್ರಬಂಧಕ ವಸಂತ ಜಾಲಾಡಿಯವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಅಶ್ವಿನ್ ಎಲ್,ಶೆಟ್ಟಿ, ಮಹಾದೇವ ಎಂ. ಮತ್ತು ಸೀತಾರಾಮ ಶೆಟ್ಟಿ ಹಾಗೂ ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರುಗಳಾದ ಭಾಸ್ಕರ ಕೋಟ್ಯಾನ್, ದೇವಿಪ್ರಸಾದ ಶೆಟ್ಟಿ, ಎಸ್.ಬಿ.ಜಯರಾಮ ರೈ ಬಳಜ್ಜ, ದೇವರಾಜ್, ಶಶಿಕುಮಾರ್ ರೈ ಬಾಲ್ಯೊಟ್ಟು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.