ಸುಳ್ಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ಆರಂಭ

Advt_Headding_Middle
Advt_Headding_Middle

ದ.ಕ.ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಜಿಲ್ಲಾ ಮಟ್ಟದ ಮತ್ತು ಸುಳ್ಯ ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಕರ್ನಾಟಕ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಹಾಗೂ ಸುಳ್ಯ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆಯು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಆರಂಭಗೊಂಡಿದೆ.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ ಸಮಾರಂಭ ಉದ್ಘಾಟಿಸಿದರು. ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ. ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಹೇಮನಾಥ ಶೆಟ್ಟಿ, ಜಿ.ಪಂ. ಸದಸ್ಯರುಗಳಾದ ಶ್ರೀಮತಿ ಆಶಾ ತಿಮ್ಮಪ್ಪ, ಶ್ರೀಮತಿ ಪುಷ್ಪಾವತಿ, ಎಸ್.ಎನ್. ಮನ್ಮಥ , ಹರೀಶ್ ಕಂಜಿಪಿಲಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಗಳಾಗಿದ್ದರು.


ತೆಂಡೇಕೆರೆ ಸ.ಪ.ಪೂ. ಪ್ರಾಂಶುಪಾಲ ಬಿ.ಮಹೇಶ್ ಹರವೆ ಪ್ರಧಾನ ಭಾಷಣ ಮಾಡಿದರು.


ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ವೈ. ಶಿವರಾಮಯ್ಯ, ಮಂಗಳೂರು ಡಯಟ್ ಉಪನಿರ್ದೇಶಕ ಸಿಪ್ರಿಯಾನ್ ಮೊಂಥೇರೋ, ಕ್ಷೇತ್ರ ಶಿಕ್ಷಣಾಧಿಕಾರಿ ಯು.ಆರ್.ಲಿಂಗರಾಜೇ ಅರಸ್, ಎಪಿಎಂಸಿ ಆಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ತಾ.ಪಂ.ಉಪಾಧ್ಯಕ್ಷೆ ಶ್ರೀಮತಿ ಶುಭದಾ ರೈ, ಸದಸ್ಯರಾದ ಜಾಹ್ನವಿ ಕಾಂಚೋಡು, ಪುಷ್ಪಾ ಮೇದಪ್ಪ, ಜಿ.ಪಂ. ಉಪ ಕಾರ್ಯದರ್ಶಿ ಜಿ.ಜಿ.ನಾಯಕ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ ಭಟ್, ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್ , ಶಿಕ್ಷಕ ದಿನಾಚರಣೆಯ ನೋಡಲ್ ಅಧಿಕಾರಿ ಡಾ.ಸುಂದರ ಕೇನಾಜೆ ಮೊದಲಾದವರು ಉಪಸ್ಥಿತರಿದ್ದರು. ಅಚ್ಚುತ ಅಟ್ಲೂರು, ಚಂದ್ರಮತಿ, ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.