ಗುತ್ತಿಗಾರು ಸೆ.17ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Advt_Headding_Middle
Advt_Headding_Middle

ದ.ಕ.ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವುಗಳ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೆ. 17ರಂದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸ್ವಾಗತ ಸಮಿತಿಯ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜರವರು ಸೆ.೮ರಂದು ಗುತ್ತಿಗಾರಿನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ಅವರು ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ ಗೌಡ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಾಲೂಕು ಪಂಚಾಯತ್ ಸದಸ್ಯೆ ಯಶೋದಾ ಬಾಳೆಗುಡ್ಡೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಪ್ರೌಢಶಾಲಾ ಉಪನಿರ್ದೇಶಕ ವೈ.ಶಿವರಾಮಯ್ಯ, ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕ ರಘುನಾಥ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗವಹಿಸಲಿದ್ದಾರೆ.

ಕ್ರೀಡಾಕೂಟದ ಪೂರ್ವಭಾವಿ ತಯಾರಿಯಾಗಿ ಶಾಲಾ ಮೈದಾನವನ್ನು ಸ್ವಚ್ಛಗೊಳಿಸಲಾಗಿದ್ದು, ೪ ಅಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಗುತ್ತಿಗಾರು ಪಿ.ಎ.ಸಿ ಬ್ಯಾಂಕ್‌ನ ಅಧ್ಯಕ್ಷ ಕೇಶವ ಭಟ್ ಮುಳಿಯ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೊಳಿಕೆ, ಗುತ್ತಿಗಾರು ಲಯನ್ಸ್ ಅಧ್ಯಕ್ಷ ಲಯನ್ ಬಾಲಕೃಷ್ಣ ಗೌಡ ಕೆ. ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಊರಿನ ವಿವಿಧ ಸಂಘ ಸಂಸ್ಥೆಗಳು ಸಹಕರಿಸಲಿದ್ಧಾರೆಂದು ಅವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಲೋಕೇಶ್ವರ ಡಿ.ಆರ್., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆನಂದ ಕೆಂಬಾರೆ, ಆರ್ಥಿಕ ಸಮಿತಿ ಸಂಚಾಲಕ ಕೇಶವ ಹೊಸೊಳಿಕೆ, ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಕ್ರೀಡಾ ಸಮಿತಿಯ ಸಂಚಾಲಕರು ಶಿವಪ್ರಕಾಶ್ ಅಡ್ಡನಪಾರೆ, ಮಾಧವ ಎರ್ದಡ್ಕ, ಮಿಥುನ್ ಬಾಕಿಲ, ಲತಾಕುಮಾರಿ ಆಜಡ್ಕ ,ಎಸ್.ಡಿ.ಎಂ.ಸಿ. ಸದಸ್ಯ ಶ್ರೀನಿವಾಸ, ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ, ,ಶಾಲಾ ಶಿಕ್ಷಕರಾದ ನೆಲ್ಸನ್ ಕ್ಯಾಸ್ಟಲಿನೋ, ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದು, ಕ್ರೀಡಾಕೂಟದಲ್ಲಿ ಉಪಹಾರ ಹಾಗೂ ಭೋಜನ ವ್ಯವಸ್ಥೆ ಇದ್ದು, ಸಂಪೂರ್ಣ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.