ಸೆ.13ರಂದು ಕೋಲ್ಚಾರಿನಲ್ಲಿ ೨೨ನೇ ವರ್ಷದ ಗಣೇಶೋತ್ಸವ

Advt_Headding_Middle
Advt_Headding_Middle


ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮತ್ತು ಅಭಿನಂದನಾ ಸಮಾರಂಭವು ಸೆ.13ರಂದು ಭಜನಾ ಮಂದಿರದ ವಠಾರದಲ್ಲಿ ನಡೆಯಲಿರುವುದು.

ಪೂರ್ವಾಹ್ನ ವೇದವ್ಯಾಸ ತಂತ್ರಿಯವರಿಂದ ಗಣೇಶನ ವಿಗ್ರಹ ಪ್ರತಿಷ್ಠಾಪನೆಯಾಗಿ ಭಜನಾ ಕಾರ್ಯಕ್ರಮ ನೆರವೇರಲಿದೆ. ಬೆಳಿಗ್ಗೆ 11 ಗಂಟೆಗೆ 24  ತೆಂಗಿನಕಾಯಿ ಗಣಹೋಮ, ನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಅಪರಾಹ್ನ 12 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿರುವುದು. ವಿಶೇಷವಾಗಿ ಈ ಬಾರಿ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸುವುದರೊಂದಿಗೆ ಸಂಗ್ರಹವಾದ ನಗದಲ್ಲಿ ಒಂದಷ್ಟು ಮೊತ್ತವನ್ನು ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೇರಳ ಮತ್ತು ಕೊಡಗು ಜಿಲ್ಲೆಯ ಸಂತ್ರಸ್ತರ ಪರಿಹಾರ ನಿಧಿಗೆ ನೀಡುವುದಾಗಿ ಸಮಿತಿಯ ಅಧ್ಯಕ್ಷ ಪ್ರಣೀತ್ ಕಣಕ್ಕೂರುರವರು ಪತ್ರಿಕೆಗೆ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.