Breaking News

ಎನ್ನೆಂಸಿ: ಆಂತರ್‍ಯ ೨೦೧೮ ಪ್ರತಿಭಾ ದಿನಾಚರಣೆ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಾಸ್ಕೃತಿಕ ಸಂಘದ ವತಿಯಿಂದ ಆಂತರ್‍ಯ ೨೦೧೮ ಪ್ರತಿಭಾ ದಿನಾಚರಣೆ ಕಾಲೇಜಿನ ಕೆ ವಿ ಜಿ ಷಷ್ಟ್ಯಬ್ದ ರಂಗ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಪ್ರೋತ್ಸಾಹ ಮತ್ತು ಮಾರ್ಗದರ್ಶನದೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಎನ್ ಎಸ್ ಶೆಟ್ಟರ್, ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜವರೇಗೌಡ ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ವಿವಿಧ ಸಂಗೀತ ಪರಿಕರಗಳನ್ನು ಬಾರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿ ಶುಭ ಹಾರೈಸಿ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಇಂತಹ ವೇದಿಕೆ ಅತ್ಯಾವಶ್ಯಕ ಎಂದರು. ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ. ಅನುರಾಧಾ ಕುರುಂಜಿ ಪ್ರಸ್ತಾವನೆಗೈದು ಸ್ವಾಗತಿಸಿದರು. ಸಾಂಸ್ಕೃತಿಕ ಸಂಘದ ಸದಸ್ಯರಾದ ಪ್ರಣೀತಾ ಬಿ ಪಿ, ಮಾನಸಾ ಬಿ, ಕಾವ್ಯಾ ಕೆ ಜಿ, ವೆಂಕಟ್ರಾಜ್, ಧನರಾಜ್, ಮನೋಜ್‌ಕುಮಾರ್, ಹರಿಪ್ರಸಾದ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವಿತ್, ಸಾಂಸ್ಕೃತಿಕ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಚೇತನ್ ಕುಮಾರ್, ಶರಣ್ಯ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಉಪನ್ಯಾಸಕ ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಪ್ರತಿಭೆಗೆ ಸಾಕ್ಷಿಯಾದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.