Breaking News

ದುಗಲಡ್ಕ ದಲ್ಲಿ 18ನೇ ವರ್ಷದ ಶ್ರೀ ಗಣೇಶೋತ್ಸವ

Advt_Headding_Middle
Advt_Headding_Middle

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದುಗಲಡ್ಕ ಇದರ ಆಶ್ರಯದಲ್ಲಿ 18 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.13ರಂದು ದುಗಲಡ್ಕ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ  ಧ್ವಜಾರೋಹಣ, ಸ್ಥಳ ಶುದ್ಧಿ, ಗಣಪತಿ ಪ್ರತಿಷ್ಠೆ, ಗಣಪತಿ ಹವನ, ಮಕ್ಕಳಿಗೆ ಅಕ್ಷರಾಭ್ಯಾಸ, ಭಜನಾ ಕಾರ್ಯ ಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

 

ಅಪರಾಹ್ನ ಗಂಟೆ ೨ ರಿಂದ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಒಂದು ನಿಮಿಷದ ವಿವಿಧ ಸ್ಪರ್ಧೆ ಗಳು, ಸಂಜೆ ಧಾರ್ಮಿಕ ಸಭಾ ಕಾರ್ಯ ಕ್ರಮ- ಶ್ರೀ ದೇವಿ ನಾಗರಾಜ್ ಭಟ್ ಸುಳ್ಯ ರವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ. ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆ ೬ ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಬಳಿಕ ಶ್ರೀ ಗಣೇಶನ ವೈಭವದ ಶೋಭಾಯಾತ್ರೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.