ಬೆಳ್ಳಾರೆ : ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

Advt_Headding_Middle
Advt_Headding_Middle

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃಧ್ಧಿ ಯೋಜನೆ ಸುಳ್ಯ, ಸ್ನೇಹಿತರ ಕಲಾ ಸಂಘ(ರಿ) ಬೆಳ್ಳಾರೆ, ಗ್ರಾ.ಪಂ. ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ಬೆಳ್ಳಾರೆಯ ಅಂಬೇಡ್ಕರ್ ಭವನದಲ್ಲಿ ಸೆ.೧೮ರಂದು ನಡೆಯಿತು.

 

ಬೆಳ್ಳಾರೆ ಗ್ರಾ.ಪಂ. ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪಲ್ಲವಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಸ್ನೇಹಿತರ ಕಲಾ ಸಂಘ(ರಿ) ಬೆಳ್ಳಾರೆ ಇದರ ಅಧ್ಯಕ್ಷ ಆನಂದ ಗೌಡ ಪಡ್ಪು ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸುಳ್ಯದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸರಸ್ವತಿ ಪಿ, ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸುನೀತಾ ನಾಯ್ಕ್, ಅಜಪಿಲ ಶ್ರೀ ಮಾಹಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಗುಣವತಿ ಮಂಡೇಪು, , ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅದ್ಯಕ್ಷೆ ಹರಿಣಾಕ್ಷಿ ರೈ ಪನ್ನೆ ಉಪಸ್ಥಿತರಿದ್ದರು. ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ವತಿಯಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಶಿಕ್ಷಕಿ ಸುಲೋಚನಾರವರನ್ನು ಸಮ್ಮಾನಿಸಲಾಯಿತು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಸಂಜಯ್ ನೆಟ್ಟಾರ್ ಸ್ವಾಗತಿಸಿ, ಮುಕ್ಕೂರು ಅಂಗನವಾಡಿ ಶಿಕ್ಷಕಿ ರುಪಾ ವಂದಿಸಿದರು. ೫೪ ಸ್ಪರ್ಧಿಗಳು ಆಹಾರ ಸಪ್ತಾಹದ ಸ್ಪರ್ಧೆಯಲ್ಲಿ ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.