ಗೂಡಿನಬಳಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ :  NSUI ಜಿಲ್ಲಾ ಪ್ರದಾನ ಕಾರ್ಯದರ್ಶಿ ಸವಾದ್ ಸುಳ್ಯ  ಖಂಡನೆ

Advt_Headding_Middle
Advt_Headding_Middle
   ಗೂಡಿನಬಳಿಯಲ್ಲಿ ಇತ್ತೀಚೆಗೆ ಮೂರು ಮಂದಿ ಸೇರಿ 9 ರ ಹರೆಯದ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಮಾನವೀಯ ಮೌಲ್ಯಕ್ಕೆ ಎಸಗಿದ ಅಪಚಾರ. ಇಂತಹ ಅಮಾನವೀಯ ಹಾಗೂ ಪೈಶಾಚಿಕ ಕೃತ್ಯ ಅತ್ಯಂತ ಹೇಯ ಹಾಗೂ ಖಂಡನೀಯ ಎಂದು NSUI ಜಿಲ್ಲಾ ಪ್ರದಾನ ಕಾರ್ಯದರ್ಶಿ ಸವಾದ್ ಸುಳ್ಯ ತೀವ್ರವಾಗಿ ಖಂಡಿಸಿದರು.
ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅವರು ನಾಲ್ಕನೇ ತರಗತಿ ಕಲಿಯುತ್ತಿರುವ ಪುಟ್ಟ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕಿರಾತಕರು ಯಾವುದೇ ಜಾತಿ, ಧರ್ಮಕ್ಕೆ ಸೇರಿದವರಾಗಿದ್ದರೂ ಅವರ ವಿರುದ್ದ ಕಠಿಣ ಕ್ರಮ ಅಗತ್ಯ ಎಂದಿದ್ದಾರೆ.
ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಿರುವ ಬಂಟ್ವಾಳ ಪೊಲೀಸರ ಕ್ರಮವನ್ನು ಶ್ಲಾಘಿಸಿರುವ ಸವಾದ್ ಸುಳ್ಯ ನಿಜಕ್ಕೂ  ಮಾನವೀಯ ಮೌಲ್ಯಕ್ಕೆ ಇದೊಂದು ಕಪ್ಪು ಚುಕ್ಕೆಯಾಗಿದ್ದು, ಇಂತಹ ಅಮಾನವೀಯ ಘಟನೆಗಳು ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ನಡೆಯಬಾರದು. ಈ ಒಂದು ಘಟನೆ ಸಮಾಜಕ್ಕೆ ಒಂದು ಪಾಠವಾಗುವ ರೀತಿಯಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.