Breaking News

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Advt_Headding_Middle
Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇವರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಪ್ರೌಢಶಾಲಾ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸೆ. 7 ರಂದು ನಡೆಯಿತು.

ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ದೈಹಿಕ ಶಿಕ್ಷಣ ಪರೀವೀಕ್ಷಕರಾದ ಲಕ್ಷ್ಮೀಶ ರೈ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಇಲ್ಲಿನ ಶಿಕ್ಷಕರು ಮಕ್ಕಳೊಂದಿಗೆ ಉತ್ತಮ ಬಾಂಧವ್ಯ ಇರುವ ಕಾರಣ ಇಂತಹ ಪಂದ್ಯಾವಳಿಯನ್ನು ಆಯೋಜಿಸಲು ಸಾಧ್ಯ. ಸೋಲು ಗೆಲುವು ಜೀವನದ ಅವಿಭಾಜ್ಯ ಅಂಗ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ಎಂದು ಶುಭಹಾರೈಸಿದರು.

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸಂಚಾಲಕರಾದ ಡಿ ಸುಲೋಚನ ಗೌಡ ಇವರು ಸಾಂಘಿಕ ಪ್ರಯತ್ನದಿಂದ ಇಂತಹ ಪಂದ್ಯಾವಳಿಯನ್ನು ಆಯೋಜಿಸಲು ಸಾಧ್ಯ ಮತ್ತು ಎಲ್ಲಾರ ಸಹಕಾರ ಅತ್ಯಗತ್ಯ, ಎಲ್ಲಾ ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯನ್ನು ಮೆರೆದು ತೀರ್ಪುಗಾರರ ತೀರ್ಪುನ್ನೂ ಗೌರವಿಸಬೇಕು ಎಂದು ಶುಭಹಾರೈಸಿದರು. ಮಾತೃ ಸಂಸ್ಥೆಯ ಕಾರ್ಯದರ್ಶಿರವರಾದ ಹರಿಶ್ಚಂದ್ರ ಮೋಂಟಡ್ಕ, ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ತೇಜಸ್ವಿ ಕಡಪಳ ಸಭೆಯಲ್ಲಿ ಉಪಸ್ಥಿತರಿದ್ದರು.

ಹರಿಶ್ಚಂದ್ರ ಮೋಂಟಡ್ಕ ಇವರು ಅಂಕಣದಲ್ಲಿ ಬಾಲ್ ಹಾರಿಸುವ ಪಂದ್ಯಾಟಕ್ಕೆ ಚಾಲನೆ ನೀಡಿದರು.
ಸಭೆಯಲ್ಲಿ ಸುಳ್ಯ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಮೂಕಮಲೆ ಇವರು ಸ್ವಾಗತಿಸಿದರು. ಹರಿಪ್ರಸಾದ್ ಕೆ ಸಹಶಿಕ್ಷಕರು ವಂದನೆಗೈದರು. ಸಂಕೀರ್ಣ ಚೊಕ್ಕಾಡಿ ಸಹಶಿಕ್ಷಕರು ಕಾರ್ಯಕ್ರಮ ನಿರೂಪಿಸಿದರು.
ಬಹುಮಾನದ ಪ್ರಾಯೋಜಕರಾಗಿ ಹಳೆ ವಿದ್ಯಾರ್ಥಿಗಳ ಸಂಘ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ, ಶ್ರೀ ಮಹಾವಿಷ್ಣು ಅಟೋ ಚಾಲಕರ ಸಂಘ ಕುಕ್ಕುಜಡ್ಕ, ಶ್ರೀ ತೇಜಸ್ವಿ ಕಡಪಳ ಇವರು ಸಹಕರಿಸಿದರು.
ಬಾಲಕರ ವಿಭಾಗ:
ಪ್ರಥಮ : ಸೈಂಟ್ ಜೋಸೆಫ್ ಪ್ರೌಢಶಾಲೆ ಸುಳ್ಯ.
ದ್ವಿತೀಯ: ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ.

ಬಾಲಕಿಯರ ವಿಭಾಗ:
ಪ್ರಥಮ: ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ.
ದ್ವಿತೀಯ: ಸೈಂಟ್ ಜೋಸೆಫ್ ಪ್ರೌಢಶಾಲೆ ಸುಳ್ಯ.

 

 

ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.