ಅ.೦೮: ಪೆರುವಾಜೆ ಶ್ರೀ ಜಲದುರ್ಗಾದೇವೀ ಕ್ಷೇತ್ರದಲ್ಲಿ ನಿರ್ಮಿಸಿದ ಮಿನಿ ಸಭಾಭವನ ಉದ್ಘಾಟನೆ ಮತ್ತು ಗುದ್ದಲಿ ಪೂಜೆ

Advt_Headding_Middle
Advt_Headding_Middle

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನಿರ್ಮಿಸಿದ ಮಿನಿ ಸಭಾಭವನದ ಉದ್ಘಾಟನೆ ಮತ್ತು ಯಾತ್ರಿನಿವಾಸಕ್ಕೆ ಗುದ್ದಲಿಪೂಜೆ ಅ.೦೮ ರಂದು ದೇವಸ್ಥಾನದಲ್ಲಿ ನಡೆಯಲಿದೆ.
ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಮಿನಿ ಸಭಾಭವನವನ್ನು ಉದ್ಘಾಟಿಸಲಿದ್ದಾರೆ.
ಶಾಸಕ ಎಸ್. ಅಂಗಾರರವರು ಕಾರ್ಯ

ಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಯಾತ್ರಿ ನಿವಾಸಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿಠಲ ಶೆಟ್ಟಿ ಪೆರುವಾಜೆಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ,ಚಂದ್ರಪ್ರಕಾಶ್ ತುಂಬೆಗುತ್ತು,ಪದ್ಮಶೇಖರ ಜೈನ್, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು,ತಾ.ಪಂ.ಸದಸ್ಯೆ ಶ್ರೀಮತಿ ನಳಿನಾಕ್ಷಿ, ಪೆರುವಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ,ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶಕುಂತಲಾ ನಾಗರಾಜ್,ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ,ಸದಸ್ಯೆ ಶ್ರೀಮತಿ ರಾಜೀವಿ ಆರ್.ರೈ,ಸದಸ್ಯ ಮಹೇಶ ಕರಿಕ್ಕಳ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಪದ್ಮನಾಭ ಕೋಟ್ಯಾನ್,ಶ್ರೀಮತಿ ವಿಮಲಾ ರಂಗಯ್ಯ, ಬೆಳ್ಳಾರೆ ಪೊಲೀಸು ಠಾಣೆ ಸಬ್‌ಇನ್ಸ್‌ಪೆಕ್ಟರ್ ಈರಯ್ಯ, ನ್ಯಾಯವಾದಿ ಎನ್.ಜಯಪ್ರಕಾಶ್ ರೈ,ಮುಕ್ಕೂರು ಹಾ.ಉ.ಸ.ಸಂ.ಅಧ್ಯಕ್ಷ ದಯಾಕರ ಆಳ್ವ, ಶ್ರೀ.ಕ್ಷೇತ್ರ ಧ.ಗ್ರಾ.ಯೋ.ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಕಾಮತ್, ಅನಿಲ್ ರೈ , ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ, ಪ್ರಗತಿಪರ ಕೃಷಿಕ ಪ್ರಬಾಕರ ರಾವ್ ಪುತ್ತಿಲ,ಬೆಳ್ಳಾರೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಎಸ್.ಡಿ.ವಿಠಲದಾಸ್, ನಿವೃತ್ತ ಉಪನ್ಯಾಸಕ ರಾಮಕೃಷ್ಣ ರಾವ್ ಪೆರುವಾಜೆ ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು ತಿಳಿಸಿದ್ದಾರೆ.
ರಮಾ, ಯು,ಟಿ. ಅಂಗಾರ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.