Breaking News

ಬಿಜೆಪಿ ವತಿಯಿಂದ ಸಂಪಾಜೆಯಿಂದ ಕನಕಮಜಲುವರೆಗೆ ಮುಖ್ಯ ರಸ್ತೆಯುದ್ದಕ್ಕೂ ೬ ಕೇಂದ್ರಗಳಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle

 

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಗ್ರಾಮ ವಿಕಾಸ ಸಮಿತಿಗಳ ಒಕ್ಕೂಟ ಸುಳ್ಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಂಪಾಜೆಯಿಂದ ಕನಕಮಜಲುವರೆಗೆ ಮುಖ್ಯ ರಸ್ತೆಯುದ್ದಕ್ಕೂ ೬ ಕೇಂದ್ರಗಳಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವು ಸೆ.30ರಂದು ನಡೆಯಿತು.

 

ಬೃಹತ್ ಸ್ವಚ್ಛತಾ ಕಾರ್ಯಕ್ರಮವು ಸಂಪಾಜೆ, ಅರಂತೋಡು, ಅರಂಬೂರು,ಸುಳ್ಯ ನಗರ, ಜಾಲ್ಸೂರು ಹಾಗೂ ಕನಕಮಜಲಿನಲ್ಲಿ ಏಕಕಾಲದಲ್ಲಿ ಉದ್ಘಾಟನೆಗೊಂಡಿತು. 

ಸಂಪಾಜೆಯ ಕಲ್ಲುಗುಂಡಿ ಕೂಲಿಶೆಡ್‌ನಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಡಿಕೇರಿ ತಾ.ಪಂ. ಸದಸ್ಯ, ಪೆರಾಜೆ ಸೊಸೈಟಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಅರಂತೋಡಿನ ಭಜನಾ ಮಂದಿರದ ಬಳಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಲತಾಮಧುಸೂದನ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕೊಡೆಂಕಿರಿ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ.ಸದಸ್ಯೆ ಶ್ರೀಮತಿ ಪುಷ್ಪಾ ಮೇದಪ್ಪ, ಗ್ರಾ.ಪಂ. ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಸೋಮಶೇಖರ ಪೈಕ, ಸಂತೋಷ್ ಕುತ್ತಮೊಟ್ಟೆ, ದಯಾನಂದ ಕುರುಂಜಿ ಸೇರಿದಂತೆ ಅರಂತೋಡು ಭಾಗದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಅರಂಬೂರು ಭಜನಾ ಮಂದಿರದ ಬಳಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಆಲೆಟ್ಟಿ ಸೊಸೈಟಿ ಅಧ್ಯಕ್ಷ ಕೃಪಾಶಂಕರ ತುದಿಯಡ್ಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉದ್ಯಮಿ ಶ್ರೀ ಕೃಷ್ಣ ಕಾಮತ್ ಮಾಜಿ ತಾ.ಪಂ. ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಜಗದೀಶ್ ಸರಳಿಕುಂಜ ಸೇರಿದಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಸುಳ್ಯ ನಗರದ ಬಸ್ಸು ನಿಲ್ದಾಣದ ಬಳಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಶಾಸಕ ಎಸ್. ಅಂಗಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ವಿನಯಕುಮಾರ್ ಕಂದಡ್ಕ, ನ.ಪಂ. ಬಿಜೆಪಿ ಸದಸ್ಯರುಗಳು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಜಾಲ್ಸೂರಿನ ಮುಖ್ಯ ಪೇಟೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಸುಳ್ಯದ ಮಕ್ಕಳ ತಜ್ಞರಾದ ಡಾ.ಶ್ರೀಕೃಷ್ಣ ಬಿ.ಎನ್. ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಜಾಲ್ಸೂರು ಶಕ್ತಿಕೇಂದ್ರದ ಅಧ್ಯಕ್ಷ ಉದಯಕುಮಾರ್ ಆಚಾರ್, ಜಯರಾಮ ರೈ ಜಾಲ್ಸೂರು, ನಾರಾಯಣ ಗೌಡ ಕದಿಕಡ್ಕ, ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷ ದಿನೇಶ್ ಅಡ್ಕಾರು, ಸದಸ್ಯರಾದ ಜನಾರ್ಧನ ಆಚಾರ್ಯ,ಭುವನೇಂದ್ರ ಬೊಳುಬೈಲು, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸತೀಶ್ ಕೆಮನಬಳ್ಳಿ, ನಿರ್ದೇಶಕ ಜಯಪ್ರಕಾಶ್ ಬೈತಡ್ಕ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಮಂಡೆಕೋಲು ಗ್ರಾ.ಪಂ. ಸದಸ್ಯ ಡಿ.ಸಿ. ಬಾಲಚಂದ್ರ ದೇವರಗುಂಡ, ಜಾಲ್ಸೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಅಶೋಕ ಅಡ್ಕಾರು, ಹಿ.ಜಾ.ವೇದಿಕೆಯ ಜಾಲ್ಸೂರು ವಲಯಾಧ್ಯಕ್ಷ ತೀರ್ಥರಾಮ ಬಾಳೆಕೋಡಿ, ದಾಮೋದರ ಪದವು, ಜಾಲ್ಸೂರು ರಿಕ್ಷಾ ಚಾಲಕರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ವಠಾರದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ನಿವೃತ್ತ ಯೋಧ ರಘುಪತಿ ಯು.ಎಂ. ಮಂಡೆಕೋಲು ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ಮಾಜಿ ತಾ.ಪಂ. ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಗ್ರಾ.ಪಂ. ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಎ.ಪಿ.ಎಂ.ಸಿ. ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಸೊಸೈಟಿ ನಿರ್ದೇಶಕರುಗಳಾದ ದಿವಾಕರ ಕಾಳಪ್ಪಜ್ಜನಮನೆ, ವಸಂತ ಮಳಿ, ಈಶ್ವರ ಕೊರಂಬಡ್ಕ, ಹರೀಶ್ ಮೂರ್ಜೆ ಮತ್ತು ಹೇಮಂತ್ ಮಠ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕಾರ್ಯಕರ್ತರಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.