ಅ.1-2: ಚೊಕ್ಕಾಡಿ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ಸುಳ್ಯ ತಾಲೂಕು ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಯ ಹಾಗೂ ಭಗವಾನ್ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ ಅ.೧ ಹಾಗೂ ೨ ರಂದು ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ಇಲ್ಲಿ ನಡೆಯಲಿದೆ.

ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕಿನ ಸುಳ್ಯ, ಗಾಂಧಿನಗರ, ಬೆಳ್ಳಾರೆ, ಪಂಜ, ಗುತ್ತಿಗಾರು ಹೋಬಳಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಥಿಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟವನ್ನು ಶಾಸಕ ಎಸ್ ಅಂಗಾರ ಉದ್ಘಾಟಿಸಲಿದ್ದು, ಭಗವಾನ್ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ಚೊಕ್ಕಾಡಿ ಇದರ ಅಧ್ಯಕ್ಷ ಲಕ್ಷ್ಮೀನಾರಾಯಣ ಕೋಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಆಶಾ ತಿಮ್ಮಪ್ಪ ಗೌರವ ವಂದನೆ ಸ್ವೀಕರಿಸಲಿದ್ದು, ತಾಲೂಕು ಧ್ವಜವನ್ನು ರಾಧಾಕೃಷ್ಣ ಬೊಳ್ಳೂರು, ಶಾಲಾ ಧ್ವಜವನ್ನು ಕೆ.ಜಯರಾಜ ಆಚಾರ್ ದ್ವಜಾರೋಹಣ ಮಾಡಲಿದ್ದಾರೆ. ಎಸ್.ಎನ್.ಮನ್ಮಥ ಕ್ರೀಡಾಂಗಣದ ಉದ್ಘಾಟನೆ ಮಾಡಲಿದ್ದು, ಯನ್.ಜಯಪ್ರಕಾಶ್ ರೈ ಬಾಸ್ಕೆಟ್ ಬಾಲ್ ಕೋರ್ಟ್ ಉದ್ಘಾಟನೆ ಮಾಡಲಿದ್ದಾರೆ.

ಮಹೇಶ್ ಕುಮಾರ್ ಕರಿಕ್ಕಳ ಕ್ರೀಡಾ ಜ್ಯೋತಿ ಬೆಳಗಿಸಲಿದ್ದು, ಹರೀಶ್ ಕಂಜಿಪಿಲಿ, ವೆಂಕಟ್ರಮಣ ಇಟ್ಟಿಗುಂಡಿ, ಪುಪ್ಪಾವತಿ ಎ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅ.೨ ರ ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ.

ಬಹುಮಾನ ವಿತರಕರಾಗಿ ಪುಷ್ಪಾವತಿ ಬಾಳಿಲ ಭಾಗವಹಿಸಲಿದ್ದು, ಸೀತಾ ಹೆಚ್, ಸುಭಾಶ್ಚಂದ್ರ ರೈ, ಶಿವಪ್ಪ ನಾಯ್ಕ ಜೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.