Breaking News

ಕೋಲ್ಚಾರು: ಪೋಷಣ ಅಭಿಯಾನ, ಹಿರಿಯ ನಾಗರಿಕರಿಗೆ ಸನ್ಮಾನ

Advt_Headding_Middle
Advt_Headding_Middle

ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಕೋಲ್ಚಾರು ಅಂಗನವಾಡಿ ಕೇಂದ್ರ, ಸ್ತ್ರೀ ಶಕ್ತಿ ಗುಂಪುಗಳ ಜಂಟಿ ಆಶ್ರಯದಲ್ಲಿ ಮಂಗಳವಾರ ಕೋಲ್ಚಾರ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ, ಐಸಿಡಿಎಸ್ ದಿನಾಚರಣೆ, ಪೋಷಣ ಅಭಿಯಾನ ಕಾರ್ಯಕ್ರಮ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳವಾರ ನಡೆಯಿತು.

 

ಬಾಲವಿಕಾಸ ಸಮಿತಿ ಸದಸ್ಯರಾದ ಲತಾ ಕುಡೆಂಬಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ರವಿಶ್ರೀ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ವಾಣಿ ಕೋಲ್ಚಾರ್, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಟಿ. ವೀಣಾ, ಸುದರ್ಶನ ಪಾತಿಕಲ್ಲು, ಕರುಣಾಕರ ಹಾಸ್ಪರೆ, ಉಷಾ ಕಣಕ್ಕೂರು, ಶಿವಪ್ರಸಾದ್ ಕೋಲ್ಚಾರ್, ವೆಂಕಟರಮಣ ಟೈಲರ್,ಆರೋಗ್ಯ ಕಾರ್ಯಕರ್ತೆ ಮಧುಶ್ರೀ ಉಪಸ್ಥಿತರಿದ್ದರು. ಈ ಸಂದರ್ಭ ಹಿರಿಯ ನಾಗರಿಕರಾದ ಕುಂಞಿರಾಮ ಕೊಲ್ಲರಮೂಲೆ ಅವರನ್ನು ಸನ್ಮಾನಿಸಲಾಯಿತು. ಶಂಕರಿ ಕೊಲ್ಲರಮೂಲೆ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರತ್ನಾವತಿ ವಾಲ್ತಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಶಾ ಕಾರ್ಯಕರ್ತೆ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು. ಶಂಕರಿ ಕೋಲ್ಚಾರ್ ವಂದಿಸಿದರು. ಕುಸುಮಾವತಿ ಕೊಂಗಾಜೆ ಪ್ರಾರ್ಥಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕೋಲ್ಚಾರ್ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಕುಂಞಿರಾಮ ಕೊಲ್ಲರಮೂಲೆ ಅವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.