ಅ.13,14 : ಐವರ್ನಾಡಿನಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ

Advt_Headding_Middle
Advt_Headding_Middle

ಯುವಶಕ್ತಿ ಸಂಘ ಐವರ್ನಾಡು, ಸಾರ್ವಜನಿಕರ ಸಹಕಾರದೊಂದಿಗೆ ೧೪ ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.೧೩ ಮತ್ತು ೧೪ ರಂದು ಐವರ್ನಾಡು ಸ.ಹಿ.ಪ್ರಾ.ಶಾಲಾ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆಯಲಿದೆ.


ರಾತ್ರಿ ನಡೆಯುವ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್,ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ, ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯವಾದಿ ಎಂ.ವೆಂಕಪ್ಪ ಗೌಡ ವಹಿಸಲಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉಪನ್ಯಾಸ ನೀಡಲಿದ್ದಾರೆ.
ಝೀ ಟಿ.ವಿ ಡ್ರಾಮ ಜ್ಯೂನಿಯರ್ ಖ್ಯಾತಿಯ ಮಾ| ತುಷಾರ್ ಗೌಡರಿಗೆ ಸನ್ಮಾನ ನಡೆಯಲಿದೆ.
ಅ,೧೩ ರಂದು ಬೆಳಿಗ್ಗೆ ಪುತ್ತಿಲ ಗಿರೀಶ್ ಅಸ್ರಣ್ಣರವರ ನೇತೃತ್ವದಲ್ಲಿ ಗಣಹೋಮ ಮತ್ತು ಶ್ರೀ ಶಾರಾದಾ ದೇವಿಯ ಪ್ರತಿಷ್ಟಾಪನೆ ನಡೆಯಲಿದೆ.
ಗ್ರಾಮಸ್ಥರಿಗೆ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ, ಸಂಜೆ ಪ್ರಾಥಮಿಕ ಶಾಲಾ ಮಕ್ಕಳ ಹಾಗೂ ಅಂಗನವಾಡಿ ಮಕ್ಕಳ ಡ್ಯಾನ್ಸ್ ನಂತರ ಫ್ಯೂಷನ್ ಇನ್ಸಿಟ್ಯೂಟ್ ಆಫ್ ಡ್ಯಾನ್ಸ್ ತಂಡದಿಂದ ಡ್ಯಾನ್ಸ್ ಡ್ಯಾನ್ಸ್ ನಡೆಯಲಿದೆ. ನಂತರ ರಂಗಮಯೂರಿ ಕಲಾ ಶಾಲೆ ಸುಳ್ಯ ಪ್ರಸ್ತುತ ಪಡಿಸುವ ಅರೆಭಾಷೆ ನಾಟಕ ಮಾಯಕ ನಂತರ ಯುವಶಕ್ತಿ ಸದಸ್ಯರಿಂದ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ.
ಅ.೧೪ ರಂದು ಬೆಳಿಗ್ಗೆ ಯುವಶಕ್ತಿ ಸದಸ್ಯರಿಂದ ಮತ್ತು ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ, “ಅಕ್ಷರಾಭ್ಯಾಸ” “ಆಯುಧ ಪೂಜೆ.” ನಡೆಯಲಿದೆ. ಮದ್ಯಾಹ್ನ ೧೨.೩೦ ರಿಂದ ಮಹಾಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ೨.೩೦ ರಿಂದ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ಐವರ್ನಾಡಿನ ಮುಖ್ಯರಸ್ತೆಯಲ್ಲಿ ಸಾಗಿ ಬಾಂಜಿಕೋಡಿ ಹೊಳೆಯಲ್ಲಿ ಜಲಸ್ತಂಭನಾ ನಡೆಯಲಿರುವುದು ಎಂದು ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.