ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲಿ ರಾಜೀವ್‌ಗಾಂಧಿ ವಿಶ್ವವಿದ್ಯಾನಿಲಯದ ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾಟ

Advt_Headding_Middle
Advt_Headding_Middle

ರಾಜೀವ್‌ಗಾಂಧಿ ವಿಶ್ವವಿದ್ಯಾನಿಲಯ ಮೈಸೂರು ವಿಭಾಗದ ವಾಲಿಬಾಲ್ ಪಂದ್ಯಾಟ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಶ್ರಯದಲ್ಲಿ ಸೆ.೨೬ರಂದು ನೆಹರೂ ಸ್ಮಾರಕ ಪದವಿ ಕಾಲೇಜಿನ ಮೈದಾನದಲ್ಲಿ ನಡೆಯಿತು.


ಪಂದ್ಯಾಟವನ್ನು ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ನಿವೃತ್ತ ಪ್ರೊಫೆಸರ್ ಡಾ| ಶೀಲಾ ಜಿ. ನಾಯಕ್‌ರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೆಡಿಕಲ್ ಸುಪರಿಡೆಂಟ್ ಡಾ| ಗೋಪಿನಾಥ್ ಪೈ ಉಪಸ್ಥಿತರಿದ್ದರು.


ಪುರುಷರ ವಿಭಾಗದಲ್ಲಿ ಮಂಗಳೂರು ಎ.ಜೆ. ಮೆಡಿಕಲ್‌ಕಾಲೇಜು ಪ್ರಥಮ ಸ್ಥಾನ, ಮೈಸೂರು ಮೆಡಿಕಲ್ ಕಾಲೇಜು ದ್ವಿತೀಯ ಸ್ಥಾನ, ಮಹಿಳೆಯರ ವಿಭಾಗದಲ್ಲಿ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಪ್ರಥಮ ಸ್ಥಾನ, ಮೈಸೂರು ಮೆಡಿಕಲ್‌ಕಾಲೇಜಿ ದ್ವಿತೀಯ ಸ್ಥಾನ ಪಡೆದುಕೊಂಡಿತು. ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತುಆಸ್ಪತ್ರೆಯ ಮುಖ್ಯಾಧಿಕಾರಿಡಾ| ಸತ್ಯವತಿಯವರು ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿಡಾ| ಸಂದೇಶ್, ಪ್ರೊಫೆಸರ್ ಡಾ.ದಾಮೋದರ್, ಪ್ರೊಫೆಸರ್ ಜವರೇಗೌಡ, ಡಾ| ಬಾಲಕೃಷ್ಣ, ಕ್ರೀಡಾ ಸಂಯೋಜಕರಾಗಿ ದೈಹಿಕ ಶಿಕ್ಷಣ ನಿರ್ದೇಶಕ ಯತಿರಾಜ್ ಬಾಜಿನಡ್ಕ ಉಪಸ್ಥಿತರಿದ್ದರು.

ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿನಿ ಅಶ್ವಿನಿ ಪ್ರಾರ್ಥಿಸಿದರು. ಡಾ| ಸತ್ಯವತಿ ಸ್ವಾಗತಿಸಿ, ಡಾ| ರಂಗನಾಥ್ ವಂದಿಸಿದರು. ವಿದ್ಯಾರ್ಥಿನಿ ಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.