Breaking News

ಅ. 15ರಂದು ಸುಳ್ಯದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರ ಬೃಹತ್ ಹಕ್ಕೊತ್ತಾಯ ಮೆರವಣಿಗೆ ಮತ್ತು ಸಭೆ

Advt_Headding_Middle
Advt_Headding_Middle

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ಮಹಿಳೆಯರ ಪ್ರವೇಶ ಕುರಿತಂತೆ ಸರ್ವೋಚ್ಛ ನ್ಯಾಯಾಲಯವು ನೀಡಿರುವ ತೀರ್ಪಿನ ಮರುಪರಿಶೀಲನೆ ಮಾಡುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಅ. ೧೫ರಂದು ತಾಲೂಕಿನ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಬೃಹತ್ ಹಕ್ಕೊತ್ತಾಯ ಮೆರವಣಿಗೆ ಮತ್ತು ಸಭೆಯು ನಡೆಯಲಿರುವುದು.

ಪೂ. ೧೦ ಗಂಟೆಗೆ ಸುಳ್ಯದ ಜ್ಯೋತಿ ವೃತ್ತದ ಬಳಿಯಿಂದ ಅಯ್ಯಪ್ಪ ಭಕ್ತರ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಬಳಿಕ ತಾಲೂಕು ಕಚೇರಿಯ ಮುಂಭಾಗದಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿರುವುದು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಿಗೆ ಸರ್ವೋಚ್ಛ ನ್ಯಾಯಾಲಯವು ನೀಡಿರುವ ತೀರ್ಪನ್ನು ಮರುಪರಿಶೀಲಿಸಿ ಹಿಂದೂ ಸಮಾಜಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿಯನ್ನು ಸಲ್ಲಿಸಲಾಗುವುದು ಎಂದು ಸುಳ್ಯ ತಾಲೂಕಿನ ಅಯ್ಯಪ್ಪ ಸ್ವಾಮಿ ಭಕ್ತ ಮಹಾಸಭಾ ಅ. ೧೨ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಸುಧಾಕರ ರೈ ಪಿ.ಬಿ. ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಭಕ್ತ ಮಹಾಸಭಾದ ಸಂಚಾಲಕ ಸುರೇಶ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್‌ಕುಮಾರ್ ಮೇನಾಲ, ನ್ಯಾಯವಾದಿ ರಾಮಕೃಷ್ಣ ಗೌಡ ಕೊಡಿಯಾಲಬೈಲ್, ಗುರುಸ್ವಾಮಿ ಸಂತೋಷ್, ಕೆಂಚಪ್ಪ, ಪದ್ಮನಾಭ, ಚಂದ್ರಶೇಖರ ಅಡ್ಪಂಗಾಯ, ಮನೀಶ್ ಗೌಡ, ಶಾಂತಪ್ಪ ಪೂಜಾರಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.