Breaking News

ಎನ್ನೆಂಸಿ: ಗಣಿತ ವಿಭಾಗದಿಂದ ರಸಪ್ರಶ್ನೆ ಕಾರ್ಯಕ್ರಮ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಗಣಿತ ವಿಭಾಗದಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಉಪನ್ಯಾಸಕ ಕಿಶೋರ್‌ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಉಪನ್ಯಾಸಕಿ ದಿವ್ಯಶ್ರೀ ಕ್ವಿಜ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದರು. ಗಣಿತ ವಿಭಾಗದ ಮುಖ್ಯಸ್ಥೆ, ಸಂಚಾಲಕಿ ಉಷಾ ಎಂ ಪಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು ಒಟ್ಟು ಐದು ತಂಡಗಳಾಗಿ ವಿಭಾಗಿಸಿ ಸ್ಪರ್ಧೆ ನಡೆಸಲಾಯಿತು. ಅಪೂರ್ವ ಕೆ ವಿ ನಾಯಕತ್ವದ ಆರ್ಯಭಟ ತಂಡ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿತು. ವಿದ್ಯಾರ್ಥಿಗಳಾದ ಶ್ರೇಯಾ ಪಿ ವಿ ಸ್ವಾಗತಿಸಿ, ಹರಿಕೃಷ್ಣನ್ ಕೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.