Breaking News

ಗಾಂಧಿನಗರ : ಸಮುದಾಯದತ್ತ ಶಾಲಾ ಕಾರ್ಯಕ್ರಮ

Advt_Headding_Middle
Advt_Headding_Middle

ಗಾಂಧಿನಗರ ಸ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮವು ಅ. 23 ರಂದು ನಡೆಯಿತು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಸ್ವರ್ಣಲತಾ, ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್.ಕೆ.ಮಹಮ್ಮದ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೆ.ಕೆ.ರೈ, ಜೈಭಾರತ್ ಯುವಕ ಮಂಡಲದ ಮಾಜಿ ಅಧ್ಯಕ್ಷ ಮಜೀದ್, ಮುಖ್ಯ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗಾಂಧಿನಗರ ಸ.ಪ್ರೌ.ಶಾಲೆಯ ಸಹಶಿಕ್ಷಕ ಚಿನ್ನಪ್ಪ ಗೌಡರನ್ನು ಸನ್ಮಾನಿಸಲಾಯಿತು. ಸಮುದಾಯದತ್ತ ಶಾಲಾ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾಗಿ ಆಗಮಿಸಿದ ಸುಳ್ಯ ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ಸಹಶಿಕ್ಷಕಿ ಯಮುನಾ ಮಾಹಿತಿ ನೀಡಿದರು. ಶಿಕ್ಷಕಿ ರಾಜೇಶ್ವರಿ ಪ್ರಾರ್ಥಿಸಿದರು. ದೈ.ಶಿ.ಶಿಕ್ಷಕಿ ಎ.ಜಿ.ಭವಾನಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಜಯಶ್ರೀ ವಂದಿಸಿ, ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.