ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಮಧುರಾ ಎಂ ಆರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜು ಆವರಣದಿಂದ ಕೆವಿಜಿ ವೃತ್ತದವರೆಗೆ ಸ್ವಯಂಸೇವಕರು ಸ್ವಚ್ಛತೆಯಲ್ಲಿ ತೊಡಗಿದರು. ಘಟಕಾಧಿಕಾರಿಗಳಾದ ಸಂಜೀವ ಕುದ್ಪಾಜೆ ಹಾಗೂ ಚಿತ್ರಲೇಖಾ ಉಪಸ್ಥಿತರಿದ್ದರು.