HomePage_Banner
HomePage_Banner
HomePage_Banner
Breaking News

ಪೆರಾಜೆ: ಫಿಲೋಮಿನಾ ಕಾಲೇಜಿನ ವತಿಯಿಂದ ಅಣಬೆ ಕೃಷಿ, ಕಸಿ ಕಟ್ಟುವಿಕೆ ಕುರಿತು ತರಬೇತಿ

                  ಗ್ರಾಮೀಣ ಭಾಗದ ಜನರಿಗೆ ಕೃಷಿಯು ಆದಾಯದ ಪ್ರಮುಖ ಮೂಲವಾಗಿದ್ದು, ಕೃಷಿ ಕ್ಷೇತ್ರದಲ್ಲಿ ವೈಜ್ಞಾನಿಕತೆ ಮತ್ತು ಸಂಶೋಧನೆಯನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿ ಪದ್ಧತಿಯನ್ನು ಅಭಿವೃದ್ಧಿ ಪಡಿಸಲು ಸಾಧ್ಯ ಎಂದು ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ನಾಗೇಶ ಕುಂದಲ್ಪಾಡಿ ಹೇಳಿದರು.
ಅವರು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್‌ನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಮತ್ತು ಕೊಡಗು ಜಿಲ್ಲಾ ಪೆರಾಜೆ ಗ್ರಾಮ ಪಂಚಾಯತು ಹಾಗೂ ತೋಟಗಾರಿಕಾ ಇಲಾಖೆ, ಮಡಿಕೇರಿ ಇವರ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಅಣಬೆ ಕೃಷಿ ಮತ್ತು ಕಸಿ ಕಟ್ಟುವಿಕೆ ಕುರಿತು ಆಯೋಜಿಸಲಾದ ಒಂದು ದಿನದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗವು ಗ್ರಾಮೀಣ ಭಾಗದ ಜನತೆಗೆ ವಿಶೇಷ ಆದ್ಯತೆ ನೀಡಿ, ಅಣಬೆ ಕೃಷಿ ಮತ್ತು ಕಸಿ ಕಟ್ಟುವಿಕೆಯಂತಹ ವಿಷಯದ ಕುರಿತು ಸಂಶೋಧನಾತ್ಮಕ ವಿಧಾನದಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾದುದು. ಪೆರಾಜೆಯಂತಹ ಗ್ರಾಮೀಣ ಪ್ರದೇಶಕ್ಕೆ ವಿಶೇಷ ಪ್ರಾತಿನಿಧ್ಯ ನೀಡಿ, ಹಲವಾರು ಕಾರ್ಯಕ್ರಮಗಳನ್ನು ಸಂಯೋಜಿಸುತ್ತಿರುವುದರಿಂದ ಈ ಊರಿನ ಜನರಲ್ಲಿ ಮಹತ್ತರ ಬದಲಾವಣೆಯನ್ನು ಕಾಣಲು ಸಾಧ್ಯವಿದೆ ಎಂದರು.
ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರತಿಭಾ ಮಾತನಾಡಿ, ಕಾಲೇಜಿನ ಸಮಾಜಕಾರ್ಯ ವಿಭಾಗವು ಈಗಾಗಲೇ ಸರಣಿ ಸಮುದಾಯ ಕಾರ್ಯಕ್ರಮವನ್ನು ಆಯೋಜಿಸಲು ಯೋಜನೆಯನ್ನು ಹಾಕಿಕೊಂಡು ಮುಂದುವರಿಯುತ್ತಿದ್ದು, ಊರಿನ ಸಂಘ ಸಂಸ್ಥೆಗಳ ಸಹಕಾರ ಹೆಚ್ಚಿನ ಪ್ರಮಾಣದಲ್ಲಿ ಬೇಕಾಗಿದೆ. ಈ ಊರಿನ ಪ್ರಜ್ಞಾ ನಾಗರಿಕರು ಈಗಾಗಲೇ ಸಂಘಟಿತರಾಗಿ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಅತ್ಯಂತ ಸಂತಸದ ವಿಚಾರ ಎಂದರು.
ಪೆರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸದಸ್ಯರಾದ ಶೀಲಾ ಚಿದಾನಂದ ಮತ್ತು ಉದಯಚಂದ್ರ ಉಪಸ್ಥಿತರಿದ್ದರು. ವಿಭಾಗದ ವಿದ್ಯಾರ್ಥಿಗಳಾದ ಮೂಕಾಂಬಿಕಾ ಸ್ವಾಗತಿಸಿ, ಪೂಜಾಶ್ರೀ ವಂದಿಸಿದರು. ಮಧುಸೂದನ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ, ಮನೋಜ್ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಸಚಿನ್ ಕುಮಾರ್, ಶೀತಲ್ ಕುಮಾರ್ ಮತ್ತು ದೀಪಿಕಾ ಸಹಕರಿಸಿದರು.

  ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುಳ್ಯದ ನೆಹರೂ ಸ್ಮಾರಕ ಕಾಲೇಜ್‌ನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕುಲದೀಪ್ ಕೃಷಿ ಕ್ಷೇತ್ರದ ಕುರಿತು ಸಂಶೋಧನಾತ್ಮಕ ಮಾಹಿತಿಯನ್ನು ಪ್ರಾತ್ಯಕ್ಷಿಕೆಯೊಂದಿಗೆ ನೀಡಿದರು. ಮಡಿಕೇರಿಯ ತೋಟಗಾರಿಕಾ ಇಲಾಖೆಯಲ್ಲಿ ಅಧಿಕಾರಿಗಳಾಗಿರುವ ಗಣೇಶ ಮತ್ತು ರಮೇಶ ಇವರು ಅಣಬೆ ಕೃಷಿಯ ತರಬೇತಿ ಪಡೆದು, ಕೃಷಿಯನ್ನು ಕೈಗೊಳ್ಳುವವರಿಗೆ ಸರಕಾರದಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ನೀಡಿದರು. ಸುಮಾರು ೫೦ಕ್ಕೂ ಮಿಕ್ಕಿ ಗ್ರಾಮಸ್ಥರು ಪಾಲ್ಗೊಂಡ ಈ ಒಂದು ದಿನದ ಕಾರ್ಯಾಗಾರದಲ್ಲಿ ಉತ್ತಮ ಗುಣಮಟ್ಟದ ಅಣಬೆ ಬೀಜವನ್ನು ವಿತರಿಸಿ, ಅಣಬೆ ಕೃಷಿಗೆ ಚಾಲನೆ ನೀಡಲಾಯಿತು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.