Breaking News

ಸಂಪಾಜೆ: ಡಾ| ಕೀಲಾರು ಗೋಪಾಲಕೃಷ್ಣ ಸಂಸ್ಮರಣೆ,ಯಕ್ಷಗಾನ ಕಾರ್ಯಕ್ರಮ

Advt_Headding_Middle
Advt_Headding_Middle


ಸಂಪಾಜೆ ಡಾ| ಕೀಲಾರು ಗೋಪಾಲಕೃಷ್ಣ ಪ್ರತಿಷ್ಠಾನ ಆಶ್ರಯದಲ್ಲಿ ಅ.೨೭ರಂದು ಮಂಗಳೂರು ಸಮೀಪದ ಅಡ್ಯಾರ್ ಗಾರ್ಡನ್‌ನಲ್ಲಿ ಆಯೋಜಿಸಲಾದ ಡಾ| ಕೀಲಾರು ಗೋಪಾಲಕೃಷ್ಣಯ್ಯ ಸಂಸ್ಮರಣೆ,ಯಕ್ಷಗಾನ -೨೦೧೮ ಮತ್ತು ಯಕ್ಷಗಾನ ಬಯಲಾಟದ ಸಭಾ ಕಾರ್ಯಕ್ರಮದಲ್ಲಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕಾಸರಗೋಡು ಶ್ರೀ ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ವಹಿಸಿದರು.


ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಒಡಿಯೂರು ಶ್ರೀ ಗುರುದೇವ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಪರಕ್ಕಜೆ ನಾರಾಯಣ ಭಟ್ ಅವರನ್ನು ಅಭಿನಂದಿಸಲಾಯಿತು. ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ರವರು ಡಾ| ಕೀಲಾರು ಗೋಪಾಲಕೃಷ್ಣಯ್ಯ ಸಂಸ್ಮರಣ ಭಾಷಣ ಮಾಡಿದರು. ಯಕ್ಷಗಾನ ಕಲಾವಿದ ವಾಸುದೇವ ರಂಗಾ ಭಟ್ ಅಭಿನಂದನ ಭಾಷಣ ಮಾಡಿದರು. ಸಂಪಾಜೆ ಡಾ| ಕೀಲಾರು ಗೋಪಾಲಕೃಷ್ಣ ಪ್ರತಿಷ್ಠಾನದ ಮುರಳೀಧರ ಸ್ವಾಗತಿಸಿದರು. ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.