HomePage_Banner
HomePage_Banner
Breaking News

ಡಿ.೬ರಂದು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸುಳ್ಯದಲ್ಲಿ ಜನ ಸಂಪರ್ಕ ಸಭೆ

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಡಿ.೬ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ. ಅ.೨.೩೦ಕ್ಕೆ ಜನ ಸಂಪರ್ಕ ಸಭೆಯು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯುವುದು. ಇದೇ ಸಂದರ್ಭದಲ್ಲಿ ಹಕ್ಕು ಪತ್ರ ವಿತರಣೆಯು ಆಗಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ತಿಳಿಸಿದರು.
ಡಿ.೧ರಂದುಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ವಿಷಯ ತಿಳಿಸಿದರು. “ಸುಳ್ಯ ನಗರ ಪಂಚಾಯಿತಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸುಳ್ಯ ನಗರದ ಕುಡಿಯುವ ನೀರಿನ ಸಮಸ್ಯೆ, ನಿವೇಶನ ಮತ್ತು ವಸತಿ ಮಂಜೂರಾತಿ ಸಮಸ್ಯೆಯ ಬಗ್ಗೆ ಸಚಿವರ ಗಮನಕ್ಕೆ ತಂದು ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗುವುದು ಎಂದರು.
ನ.ಪಂ. ಮಾಜಿ ಅಧ್ಯಕ್ಷ ಸಂಶುದ್ದೀನ್‌ರವರ ಪ್ರಯತ್ನದಿಂದ ಮಂಜೂರಾತಿಗೊಂಡ ೧೨ ಲಕ್ಷ ರೂ ವೆಚ್ಚದಲ್ಲಿ ಅನುಷ್ಠಾನಗೊಂಡ ದುಗ್ಗಲಡ್ಕ ಟೌನ್ ಫೀಡರ್‌ನ ಉದ್ಘಾಟನೆಯಾಗಲಿದೆ. ಕೊಳೆಂಜಿಕೋಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಳವಡಿಸಿದ ವಿದ್ಯುತ್ ಪರಿವರ್ತಕದ ಉದ್ಘಾಟನೆ, ದುಗ್ಗಲಡ್ಕ ದರ್ಗಾ ಶರೀಫ್‌ಗೆ ಪ್ರವಾಸೋದ್ಯಮ ಇಲಾಖೆಯ ೨೫ ಲಕ್ಷ ಅನುದಾನದಲ್ಲಿ ನಿರ್ಮಿಸುವ `ಯಾತ್ರಿ ನಿವಾಸ್’ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.