HomePage_Banner
HomePage_Banner
Breaking News

ಬೆಳ್ಳಾರೆ : ಬೃಹತ್ ಉಚಿತ ವೈದ್ಯಕೀಯ ಶಿಬಿರ

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಕಾಮಧೇನು ಮಲ್ಟಿಪರ್ಪಸ್ ಚಾರಿಟೇಬಲ್ ಟ್ರಸ್ಟ್ , ಕಾಮತ್ ಮೆಡಿಕಲ್ಸ್ ನಿಂತಿಕಲ್ಲು, ಜ್ಞಾನದೀಪ ಇಂಟರ್‍ಯಾಕ್ಟ್ ಕ್ಲಬ್ ಬೆಳ್ಳಾರೆ ಇವರ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್‌ನಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರವು ಜರುಗಿತು.


ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದ ರೋಟರಿ ಜಿಲ್ಲಾ 3181ರ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಗವರ್ನರ್ ( ವಲಯ 5) ರೋ| ಆಸ್ಕರ್ ಆನಂದ್ ಮಾತನಾಡಿ, ಸಮಾಜದ ತುತ್ತ ತುದಿಯ ವ್ಯಕ್ತಿಯು ಆರೋಗ್ಯದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಎಲ್ಲಾ ಸಂಘಟನೆಗಳ ಸಹಭಾಗಿತ್ವದಲ್ಲಿ ಈ ಆರೋಗ್ಯ ಮೇಳವನ್ನು ಸಂಘಟಿಸಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ಇತ್ತರು.
ರೋಟರಿ ಕ್ಲಬ್ ಬೆಳ್ಳಾರೆ ಟೌನ್‌ನ ಅಧ್ಯಕ್ಷ ರೋ|ಎ.ಕೆ. ಮಣಿಯಾಣಿ ಸಮಾರಂಭದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಡಿ.ನಾರಾಯಣ ಕಾಮತ್, ತಾ.ಪಂ.ಸದಸ್ಯ ಅಬ್ದುಲ್ ಗಫೂರ್, ಕೆ.ಎಂ.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಧಿಕಾರಿ ಹರ್ಬರ್ಟ್ ಮರಿಯೋ ಪೆರೈರ, ಕಾಮಧೇನು ಮಲ್ಟಿಪರ್ಪಸ್ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆಯ ಅಧ್ಯಕ್ಷ ಎಂ.ಮಾಧವ ಗೌಡ, ಇಂಟರ್‍ಯಾಕ್ಟ್ ಕ್ಲಬ್‌ನ ಅಧ್ಯಕ್ಷೆ ಕು|ಶ್ರೀನಿಧಿ,ನಿಂತಿಕಲ್ಲು ಕಾಮತ್ ಮೆಡಿಕಲ್ಸ್‌ನ ಚಂದ್ರಶೇಖರ್ ಕಾಮತ್ ಹಾಗು ವಲಯ 5ರ ಝೋನಲ್ ಲೆಪ್ಟಿನೆಂಟ್ ಯಂ. ರವೀಂದ್ರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು. ಶ್ಯಾಮಸುಂದರ್ ರೈ ಕೆರೆಮೂಲೆ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದ ಅರ್ಪಿಸಿದರು. ಶಿಬಿರದಲ್ಲಿ260 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.86ಮಂದಿಗೆ ಉಚಿತ ಕನ್ನಡಕ ವಿತರಣೆ ಗೈಯ್ಯಲಾಯಿತು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.