ಜ.23: ನಗರ ಪಂಚಾಯತ್‌ನಿಂದ ವಿಕಲಚೇತನರಿಗೆ ವೈದ್ಯಕೀಯ ಶಿಬಿರ ಮತ್ತು ಮಾಹಿತಿ ಕಾರ್ಯಾಗಾರ

ವಿಕಲಚೇತನರ ಮಾಹಿತಿ ಕಾರ್ಯಾಗಾರ ಮತ್ತು ಒಂದು ದಿನದ ವೈದ್ಯಕೀಯ ಶಿಬರವು ಜ.23ರಂದು ಬೆಳಿಗ್ಗೆ 10.30 ಕ್ಕೆ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸುಳ್ಯ ನಗರ ಪಂಚಾಯತ್, ಸುಳ್ಯ ತಾಲೂಕು ವಿಕಲ ಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ ಮತ್ತು ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆಯಲಿದ್ದು, ಕಾರ್‍ಯಕ್ರಮಕ್ಕೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಪುನರ್ವಸತಿ ಕೇಂದ್ರದ ವೈದ್ಯರು ಆಗಮಿಸಿ ವಿಕಲಚೇತನ ವ್ಯಕ್ತಿಗಳ ತಪಾಸಣೆ ನಡೆಸಲಿದ್ದಾರೆ. ಎಲ್ಲಾ ವಿಕಲಚೇತನರು ಮತ್ತು ಅವರ ಪೋಷಕರು ಕಡ್ಡಾಯವಾಗಿ ಕಾರ್‍ಯಕ್ರಮಕ್ಕೆ ಹಾಜರಾಗಬೇಕೆಂದು ನಗರ ಪಂಚಾಯತ್ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಾದ ಪ್ರವೀಣ್ ನಾಯಕ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.