ಫೆ. 24 ರಂದು ಇಂಟೆಕ್ ವತಿಯಿಂದ ಸುಳ್ಯದಲ್ಲಿ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕು ಇಂಟೆಕ್ ಹಾಗೂ ಯುವ ಇಂಟೆಕ್ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವು ಫೆ. 24ರಂದು ಸುಳ್ಯದ ಗಾಂಧಿನಗರ ಶಾಲಾ ಮೈದಾನದಲ್ಲಿ ನಡೆಯಲಿದೆ.

ಸಂಘಟಕರಲ್ಲೋರ್ವರಾದ ನಝೀರ್ ಶಾಂತಿನಗರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಈಗ ನಡೆಯುತ್ತಿರುವ ಮ್ಯಾಟ್ ಕಬಡ್ಡಿ ಪಂದ್ಯಾಟಗಳಲ್ಲಿ ಪ್ರಸಿದ್ಧ ತಂಡ ಮತ್ತು ಆಟಗಾರರಿಗೆ ಅವಕಾಶ ಸಿಗುತ್ತಿದೆ. ಆದರೆ ಸ್ಥಳೀಯ ಆಟಗಾರರಿಗೂ ಹೆಚ್ಚಿ ಅವಕಾಶ ಸಿಗಬೇಕೆಂಬ ಕಾರಣದಿಂದ ಮುಕ್ತ ಮ್ಯಾಟ್ ಕಬಡ್ಡಿ ಆಯೋಜಿಸಲಾಗಿದೆ, ಸುಮಾರು 15 ರಿಂದ 2೦ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ಸಭಾ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಯು.ಟಿ.ಖಾದರ್ ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ಮಾಜಿ ಸಚಿವ ಬಿ.ರಮಾನಾಥ ರೈ, ಇಂಟೆಕ್ ಮುಖಂಡರಾದ ಮನೋಹರ್ ಶೆಟ್ಟಿ, ದಿನಕರ ಶೆಟ್ಟಿ, ಲುಕ್ಮಾನ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ನೂರಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈಯವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.
ಇಂಟೆಕ್ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಉದಯಕುಮಾರ್ ಕುಕ್ಕುಡೇಲು, ಯುವ ಇಂಟೆಕ್ ಸಮಿತಿಯ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಮೋಹನ್ ಪಂಬೆತ್ತಾಡಿ, ಅಬ್ದುಲ್ ರಝಾಕ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.