Breaking News

ಸುಬ್ರಹ್ಮಣ್ಯ: ಕೆ.ಎಸ್.ಎಸ್. ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle

ಲಯನ್ಸ್ ಕ್ಲಬ್ ಪಂಜ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯು ಮಾ. 8ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಎನ್.ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಾರತಿ ಸೇವ್ ಗೂರ್ ಮಹಿಳೆಯರ ವಿಚಾರವಾಗಿ ಮಾತನಾಡಿದರು. ಶ್ರೀಮತಿ ವಿಮಲಾ ರಂಗಯ್ಯ ಮತ್ತು ಅಂತರಾಷ್ಟ್ರೀಯ ಮಟ್ಟದ ಒಲಿಂಪಿಕ್ಸ್ ಕ್ರೀಡಾಪಟು ರೆಬೆಕಾಜೋಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್‌ನ ಅಧ್ಯಕ್ಷ ತುಕಾರಾಮ್ ಯೇನೆಕಲ್ಲು ವಹಿಸಿ ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು. ಮಹಿಳಾ ವೇದಿಕೆಯ ಅಧ್ಯಕ್ಷೆ ಡಾ. ಉಷಾ ಎಸ್ ಅಂಕೋಲಕರ್ ಸ್ವಾಗತಿಸಿ, ಕಾರ್ಯದರ್ಶಿ ಕು. ಅಶ್ವಿನಿ ಪಿ. ವಂದಿಸಿದರು. ಕು. ಮಧು ಕಾರ್ಯಕ್ರಮ ನಿರೂಪಿಸಿದರು. ಸದಸ್ಯೆ ಶ್ರೀಮತಿ ಆರತಿ ಕಾರ್ಯಕ್ರಮ ಸಂಯೋಜನೆ ಮಾಡಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.