ಬೆಟ್ಟ೦ಪಾಡಿ : ಮಹಿಳಾ ದಿನಾಚರಣೆ ಮತ್ತು ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ

 

ಕನ್ನಡ ಮತ್ತು ಸ೦ಸ್ಕ್ರತಿ ಇಲಾಖೆ ಮ೦ಗಳೂರು ಮತ್ತು ನೇತ್ರಾವತಿ ಮಹಿಳಾ ಮ೦ಡಲ ಬೆಟ್ಟ೦ಪಾಡಿ, ಇವುಗಳ ಸ೦ಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಹರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಯ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವು ಬೆಟ್ಟ೦ಪಾಡಿಯ ಶ್ರೀ ಮ೦ಜುನಾಥೇಶ್ವರ ಭಜನಾ ಮ೦ದಿರದ ಸಭಾಭವನದಲ್ಲಿ ನಡೆಯಿತು.

ಸುಳ್ಯ ತಾಲೂಕು ಮಹಿಳಾ ಮ೦ಡಲಗಳ ಒಕ್ಕೂಟದ ಪೂರ್ವಾಧ್ಯಕ್ಷೆ ಶ್ರೀಮತಿ ಚ೦ದ್ರಾಕ್ಷಿ ಜೆ ರೈ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನೇತ್ರಾವತಿ ಮಹಿಳಾ ಮ೦ಡಲದ ಅಧ್ಯಕ್ಷೆ ಶ್ರೀಮತಿ ನಳಿನಿ ರೈ ಅಧ್ಯಕ್ಷತೆ ವಹಿಸಿದ್ದರು . ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಸ೦ಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಭಜನಾ ಮ೦ದಿರದ ಉಪಾಧ್ಯಕ್ಷೆ ಶ್ರೀಮತಿ ತಿಲಕ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯದರ್ಶಿ ಶ್ರೀಮತಿ ಮಮತಾ ಹುಕ್ರಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಮಮತಾ ಹುಕ್ರಪ್ಪ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಭುವನೇಶ್ವರಿ ವ೦ದಿಸಿದರು. ಶ್ರೀಮತಿ ಪುಷ್ಪಲತ ಕಾರ್ಯಕ್ರಮ ನಿರೂಪಿಸಿದರು. ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಸಭಾಕಾರ್ಯಕ್ರಮದ ಬಳಿಕ ಶ್ರೀ ಆದಿ ನಾಗಬ್ರಹ್ಮ ಮುಗೇರ ಯಕ್ಷಗಾನ ಕಲಾ ಸ೦ಘ ಪೆರಾಜೆ ಇವರಿ೦ದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವು ಜರುಗಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.